ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ 20 ಹೆಕ್ಟೇರ್ನಷ್ಟು ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ ಎಂದು ಅರಣ್ಯಾಧಿಕಾರಿ ಮಹೇಶ್ ತಿಳಿಸಿದ್ದಾರೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ನಿರ್ದೇಶಕ ಮಹೇಶ್ ಅವರು ವಿಡಿಯೋ ಮೂಲಕ ಹೇಳಿಕೆ ನೀಡಿದ್ದು, ನಾಗರಹೊಳೆ ಅರಣ್ಯದ ಅಂತರಸಂತೆ ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ 3.30ರ ಸುಮಾರಿಗೆ ಕಿಡಿಗೇಡಿಗಳು ಹಚ್ಚಿದ್ದರು. ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ ಎಂದರು.
ಸುಮಾರು 20 ಹೆಕ್ಟೇರ್ ನಷ್ಟು ಅರಣ್ಯ ಬೆಂಕಿಗಾಹುತಿಯಾಗಿದೆ ಎಂದು ಮಹೇಶ್ ಮಾಹಿತಿ ನೀಡಿದ್ದಾರೆ.