ETV Bharat / city

ದೇವೇಗೌಡರ ಕುಟುಂಬ ಜಾತಿ ರಾಜಕಾರಣ ಮಾಡುವುದಿಲ್ಲ: ಕುಮಾರಸ್ವಾಮಿ

author img

By

Published : Mar 19, 2022, 10:00 PM IST

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್​ ಪಕ್ಷ ಅಧಿಕಾರಕ್ಕೆ ಬಂದು ಸಾ ರಾ ಮಹೇಶ್​ ಮತ್ತೆ ಸಚಿವರಾಗಲಿದ್ದಾರೆ. ಹೀಗಾಗಿ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಮನವಿ ಮಾಡಿದರು.

kumaraswamy
ಕುಮಾರಸ್ವಾಮಿ

ಮೈಸೂರು: ಮಾಜಿ ಪ್ರಧಾನಮಂತ್ರಿ ಹೆಚ್​.ಡಿ. ದೇವೇಗೌಡರ ಕುಟುಂಬ ಜಾತಿ ರಾಜಕಾರಣ ಮಾಡುವುದಿಲ್ಲ. ಆದ್ದರಿಂದ ಸಂಕುಚಿತ ಮನೋಭಾವನೆ ಮತ್ತು ಜಾತಿಯ ವ್ಯಾಮೋಹ ಬಿಟ್ಟು ಉತ್ತಮವಾಗಿ ಕೆಲಸ ಮಾಡುತ್ತಿರುವ ಸಾ.ರಾ.ಮಹೇಶ್ ಅವರನ್ನು ಬೆಂಬಲಿಸಬೇಕು. 2023ರಲ್ಲಿ ಜೆಡಿಎಸ್​ ಅಧಿಕಾರಕ್ಕೆ ಅಧಿಕಾರಕ್ಕೆ ಬರಲಿದ್ದು ಮಹೇಶ್ ಮತ್ತೆ ಸಚಿವರಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದರು.

ಭೇರ್ಯ ಗ್ರಾಮದಲ್ಲಿ ಏತ ನೀರಾವರಿ ಕಾಮಗಾರಿಗಳಿಗೆ ಹಣ ಬಿಡುಗಡೆ, ಸಾಲಿಗ್ರಾಮವನ್ನು ತಾಲೂಕು ಕೇಂದ್ರವನ್ನಾಗಿ ಮಾಡಿದ್ದಕ್ಕಾಗಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲೂ ಸಾ ರಾ ಮಹೇಶ್​ರನ್ನು ಸೋಲಿಸಬೇಕೆಂಬ ಉದ್ದೇಶದಿಂದ ಜೆಡಿಎಸ್‌ನವರೇ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದರು ಎಂದು ಆರೋಪಿಸಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶಾಸಕ ಸಾ.ರಾ. ಮಹೇಶ್ ಅವರನ್ನು ಸೋಲಿಸಲು ದೊಡ್ಡಮಟ್ಟದಲ್ಲಿ ಚಿತಾವಣೆ ನಡೆದಿದೆ. ಜೆಡಿಎಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಅವರ ಗೆಲುವಿಗೆ ಶ್ರಮಿಸಬೇಕು ಎಂದರು.

ರೈತರ ಪರವಾಗಿ ಕೆಲಸ ಮಾಡಲು ಜೆಡಿಎಸ್ ಪಕ್ಷದಿಂದ ಮಾತ್ರ ಸಾಧ್ಯ ಎಂಬುದನ್ನು ಜನತೆ ಅರಿತು ಪಕ್ಷವನ್ನು ಬೆಂಬಲಿಸಬೇಕು. ಹೆಚ್.ಡಿ. ದೇವೇಗೌಡರ ಕುಟುಂಬಕ್ಕೂ, ಕೆ.ಆರ್.ನಗರಕ್ಕೂ ಹಾಗೂ ಸಾ.ರಾ. ಮಹೇಶ್ ಅವರಿಗೂ ನನುಗೂ ಅವಿನಾಭಾವ ಸಂಬಂಧವಿದೆ ಎಂದು ಸ್ಪಷ್ಟಪಡಿಸಿದರು.

ಶಾಸಕ ಜಿ.ಟಿ.ದೇವೇಗೌಡರು ಅವರಿಗೆ ಮತ್ತು ಅವರ ಪುತ್ರನಿಗೆ ಟಿಕೆಟ್​ ನೀಡುವಂತೆ ಕಾಂಗ್ರೆಸ್ ಬಾಗಿಲು ತಟ್ಟುತ್ತಿದ್ದು, ಚುನಾವಣೆಗೆ ವೇಳೆಗೆ ಬಿಜೆಪಿ ಸೇರ್ಪಡೆಗೊಂಡರೂ ಆಶ್ಚರ್ಯವಿಲ್ಲ. ಆದ್ದರಿಂದ ಜಿ.ಟಿ. ದೇವೇಗೌಡರ ಹೇಳಿಕೆಗಳಿಗೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಕಿವಿಗೊಡದೆ ತಳಮಟ್ಟದಿಂದ ಪಕ್ಷ ಸಂಘಟಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಓದಿ: ರಾಜ್ಯದಲ್ಲಿಂದು 173 ಮಂದಿಗೆ ಕೋವಿಡ್ ದೃಢ, ಇಬ್ಬರು ಸೋಂಕಿತರ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.