ಮೈಸೂರು: ನಗರದ ಚಾಮರಾಜ ಜೋಡಿ ರಸ್ತೆಯಲ್ಲಿ ಅಸ್ವಸ್ಥರಾಗಿ ಬಿದ್ದಿದ್ದ ಮಹಿಳೆಯೊಬ್ಬರನ್ನು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಅನಾಮಿಕ ಮಹಿಳೆ ಗಮನಿಸಿದ ಮಾಜಿ ಶಾಸಕ, ಮಹಿಳೆಯ ಸ್ಥಿತಿ ಚಿಂತಾಜನಕವಾಗಿದ್ದರಿಂದ ಕೂಡಲೇ ಆ್ಯಂಬುಲೆನ್ಸ್ ಗೆ ಕರೆ ಮಾಡಿ ಕೆ.ಆರ್. ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ರವಾನಿಸಿದ್ದಾರೆ. ಜೊತೆಗೆ ಆಸ್ಪತ್ರೆಯ ಆರ್.ಎಂ.ಒ ಅವರಿಗೆ ಕರೆ ಮಾಡಿ ಸೂಕ್ತ ಚಿಕಿತ್ಸೆ ಹಾಗೂ ಔಷಧ ನೀಡುವಂತೆ ಕೋರಿದ್ದು, ಮಹಿಳೆಯ ಚಿಕಿತ್ಸಾ ವೆಚ್ಚವನ್ನು ಅಗತ್ಯವಿದ್ದರೆ ಭರಿಸುವುದಾಗಿ ತಿಳಿಸಿದ್ದಾರೆ.
ಇನ್ನು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಅವರ ಈ ಕೆಲಸಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.