ETV Bharat / city

''2023ರ ಚುನಾವಣೆ ಗಮನದಲ್ಲಿಟ್ಟುಕೊಂಡು ಎಂಎಲ್​ಸಿ ಸಮರದಲ್ಲಿ ಪಕ್ಷವೊಂದಕ್ಕೆ ಬೆಂಬಲ ನೀಡುತ್ತೇವೆ'' - ಕೆ ರೋಸಯ್ಯ ನಿಧನಕ್ಕೆ ಹೆಚ್ ಡಿ ಕುಮಾರಸ್ವಾಮಿ ಸಂತಾಪ

ವಿಧಾನ ಪರಿಷತ್ ಚುನಾವಣೆಯಲ್ಲಿ ನಾವು ಸ್ಪರ್ಧೆ ಮಾಡದ ಕ್ಷೇತ್ರದಲ್ಲಿ ಯಾರಿಗೆ ಬೆಂಬಲ ಕೊಡಬೇಕು ಎಂದು ಎರಡು ದಿನಗಳಲ್ಲಿ ತೀರ್ಮಾನ ಮಾಡಲಾಗುತ್ತದೆ. ಮುಂದಿನ 2023ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬೆಂಬಲ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.

HD kumaraswamy
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ
author img

By

Published : Dec 4, 2021, 2:45 PM IST

Updated : Dec 4, 2021, 3:09 PM IST

ಮೈಸೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್‌ ಸ್ಪರ್ಧಿಸದ ಕ್ಷೇತ್ರದಲ್ಲಿ ಯಾರಿಗೆ ಬೆಂಬಲ ನೀಡಬೇಕೆಂದು ಎರಡು ದಿನಗಳಲ್ಲಿ ತೀರ್ಮಾನ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮೈಸೂರಿನಲ್ಲಿ ತಿಳಿಸಿದರು.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿರುವುದು

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಸ್ಪರ್ಧಿಸಿರುವ 6 ಕ್ಷೇತ್ರಗಳಲ್ಲಿ ಯಾರ ಬೆಂಬಲವನ್ನು ಕೇಳುವುದಿಲ್ಲ. ಅವರ ಅಭ್ಯರ್ಥಿ ಸೋಲಿಸಿ ನಮಗೆ ಬೆಂಬಲ ಕೊಡಿ ಎನ್ನಲ್ಲ. ಆದರೆ ನಾವು ಸ್ಪರ್ಧೆ ಮಾಡದ ಕ್ಷೇತ್ರದಲ್ಲಿ ಯಾರಿಗೆ ಬೆಂಬಲ ಕೊಡಬೇಕು ಎಂದು ಎರಡು ದಿನಗಳಲ್ಲಿ ತೀರ್ಮಾನ ಮಾಡಲಾಗುತ್ತದೆ. ಮುಂದಿನ 2023ರ ಚುನಾವಣೆ ಗಮನದಲ್ಲಿಟ್ಟುಕೊಂಡು ಬೆಂಬಲ ನೀಡುತ್ತೇವೆ ಎಂದು ತಿಳಿಸಿದರು.

ಸಿದ್ದರಾಮಯ್ಯಗೆ ನೈತಿಕತೆ ಇಲ್ಲ:

ಜೆಡಿಎಸ್ ಅಲ್ಲ ಜೆಡಿಎಫ್ ಪಕ್ಷ ಮಾಡಿ ಎಂಬ ಮಾಜಿ ಸಿಎಂ ಸಿದ್ದರಾಮಯ್ಯರ ಹೇಳಿಕೆಗೆ ಪ್ರತಿಕ್ರಿಯಿಸಿದ ಹೆಚ್​ಡಿಕೆ, ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ. ಸಿದ್ದರಾಮಯ್ಯರ ಮಗ ಶಾಸಕರಾಗಿದ್ದಾರೆ. ಅವರ ಅವರ ಇನ್ನೊಬ್ಬ ಮಗ ಅಕಾಲಿಕ ಮರಣಕ್ಕೀಡಾದರು. ಅವರು ಸಹ ಸಕ್ರಿಯ ರಾಜಕಾರಣದಲ್ಲಿದ್ದರು. ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿ ಹಲವರು ಈ ರೀತಿ ಇದ್ದಾರೆ. ಬಿಜೆಪಿ, ಕಾಂಗ್ರೆಸ್ ಪಕ್ಷದವರು ಕುಟುಂಬ ರಾಜಕಾರಣದ ಬಗ್ಗೆ ಕಾನೂನು ಜಾರಿ ಮಾಡಲಿ, ತಮ್ಮ ಸಾಮರ್ಥ್ಯದಿಂದ ಸಂವಿಧಾನ ತಿದ್ದುಪಡಿ ಮಾಡಲಿ. ಕುಟುಂಬದ ಎಷ್ಟು ಜನ ರಾಜಕಾರಣಕ್ಕೆ ಬರಬೇಕು ಎಂಬ ನಿಯಮ ಮಾಡಲಿ ಎಂದು ತಿರುಗೇಟು ನೀಡಿದರು.

ಸಿದ್ದರಾಮಯ್ಯ ಕತ್ತಿಗೆ ಸ್ಲೇಟ್ ನೇತು ಹಾಕಿಕೊಂಡು ಓಡಾಡಲಿ:

ಜೆಡಿಎಸ್ ಬಿಜೆಪಿಯ ಬಿ ಟೀಂ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ತಮ್ಮ ಬಾಯಿಗೆ ಏಕೆ ಶ್ರಮ‌ ಕೊಡುತ್ತಿದ್ದಾರೆ. ಅವರ ಹೇಳಿಕೆಯನ್ನು ಬರೆದು ಒಂದು ಸ್ಲೇಟ್ ಅನ್ನು ಕುತ್ತಿಗೆಗೆ ಹಾಕಿಕೊಂಡು ಓಡಾಡಲಿ. 2018 ರಿಂದ ಇದೇ ರೀತಿ ಹೇಳಿಕೆಯನ್ನು ನೀಡುತ್ತಿದ್ದಾರೆ. ಇದು ಸಿದ್ದರಾಮಯ್ಯ ಅವರಿಗೆ ತಿರುಗುಬಾಣವಾಗಲಿದೆ. ಇದರ ಪರಿಣಾಮವಾಗಿ 2023ರಲ್ಲಿ‌ ಜೆಡಿಎಸ್​ಗೆ ಲಾಭವಾಗಲಿದೆ. ಬಿಜೆಪಿ ಬೆಂಬಲಿಗರ ಮತ ಜೆಡಿಎಸ್​ಗೆ ಬರಲಿದೆ ಎಂದರು.

ವೈಯುಕ್ತಿಕ ಟೀಕೆ ಶೋಭೆ ತರುವುದಿಲ್ಲ:

ರಾಜ್ಯ ರಾಜಕಾರಣದಲ್ಲಿ ವೈಯುಕ್ತಿಕ ಟೀಕೆ ವಿಚಾರವಾಗಿ ಮಾತನಾಡಿ, ಮೈಸೂರು ಸೇರಿದಂತೆ ಇತರೆ ಕ್ಷೇತ್ರದಲ್ಲಿ ಎಲ್ಲರ ಹೇಳಿಕೆ ನೋಡಿದ್ದೇನೆ. ವೈಯುಕ್ತಿಕ ಟೀಕೆ ಅವರ ಸ್ಥಾನಕ್ಕೆ ಅಗೌರವ ತೋರುತ್ತದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ನಾನೂ ಹಿಂದೆ ಅಂತಹ ಹೇಳಿಕೆಗಳನ್ನು ಕೊಟ್ಟಿದ್ದೆ. ನನ್ನ ಅಭಿಮಾನಿಗಳೊಂದಿಗೆ ಈ ಬಗ್ಗೆ ಚರ್ಚೆ ಮಾಡಿದ ಮೇಲೆ ನಾನು ತಿದ್ದಿಕೊಂಡಿದ್ದೇನೆ.‌ ನನ್ನ ಆತ್ಮಕ್ಕೆ ಇದು ಸರಿ ಅಲ್ಲ ಎನಿಸಿದೆ. ಹೀಗಾಗಿ ಮುಂದೆ ಈ ರೀತಿ ಮಾತನಾಡಬಾರದು ಎಂದು ತೀರ್ಮಾನ ಮಾಡಿದ್ದೇನೆ. ನನ್ನ ಗುರಿ ಇರುವುದು 2023ರ ಚುನಾವಣೆ. ಹಾಗಾಗಿ ವೈಯುಕ್ತಿಕ ಟೀಕೆ‌ ಯಾರಿಗೂ ಶೋಭೆ ತರುವುದಿಲ್ಲ ಎಂದು ಹೇಳಿದರು.

ಜೆಡಿಎಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸ:

ಮೈಸೂರು ಹಾಗೂ ಚಾಮರಾಜನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎನ್. ಮಂಜೇಗೌಡ ಗೆಲ್ಲುವ ವಿಶ್ವಾಸವಿದೆ. ಕಳೆದ ಎರಡು ಬಾರಿಯೂ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆದ್ದಿದ್ದು, ಈ ಬಾರಿಯೂ ನಮ್ಮ ಅಭ್ಯರ್ಥಿ ಗೆಲ್ಲುವ ವಿಶ್ವಾಸ ಇದೆ ತಿಳಿಸಿದರು.

ಕೆ. ರೋಸಯ್ಯ ನಿಧನಕ್ಕೆ ಸಂತಾಪ:

ಇಂದು ಬೆಳಗ್ಗೆ ನಿಧನರಾದ ರಾಜ್ಯದ ಮಾಜಿ ರಾಜ್ಯಪಾಲರಾದ ಕೆ. ರೋಸಯ್ಯ ಅವರ ನಿಧನಕ್ಕೆ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, 2014ರಲ್ಲಿ ರಾಜ್ಯದ ರಾಜ್ಯಪಾಲರಾಗಿ, ಜೊತೆಗೆ ತಮಿಳುನಾಡಿನ ರಾಜ್ಯಪಾಲರು ಹಾಗೂ ಅವಿಭಜಿತ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಕೆ. ರೋಸಯ್ಯ ಅವರ ಹಠಾತ್ ನಿಧನ ನನಗೆ ತೀವ್ರ ಆಘಾತ ಉಂಟು ಮಾಡಿದೆ. ರಾಜಕೀಯದಲ್ಲಿ ಅಜಾತಶತ್ರು ಆಗಿದ್ದ ರೋಸಯ್ಯ ಅವರು ಪ್ರಾಮಾಣಿಕ, ದಕ್ಷ ಆಡಳಿತಗಾರರಾಗಿದ್ದರು ಎಂದು ಹೇಳಿದ್ದಾರೆ.

  • 2014ರಲ್ಲಿ ರಾಜ್ಯದ ರಾಜ್ಯಪಾಲರಾಗಿ, ಜತೆಗೆ; ತಮಿಳುನಾಡಿನ ರಾಜ್ಯಪಾಲರು ಹಾಗೂ ಅವಿಭಜಿತ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಕೆ.ರೋಶಯ್ಯ ಅವರ ಹಠಾತ್‌ ನಿಧನ ನನಗೆ ತೀವ್ರ ಆಘಾತ ಉಂಟು ಮಾಡಿದೆ.
    ರಾಜಕೀಯದಲ್ಲಿ ಅಜಾತಶತ್ರು ಆಗಿದ್ದ ರೋಶಯ್ಯ ಅವರು ಪ್ರಾಮಾಣಿಕ, ದಕ್ಷ ಆಡಳಿತಗಾರರಾಗಿದ್ದರು. 1/2 pic.twitter.com/rRjqcn1GMe

    — H D Kumaraswamy (@hd_kumaraswamy) December 4, 2021 " class="align-text-top noRightClick twitterSection" data=" ">

ಇದನ್ನೂ ಓದಿ: ಅವಿಭಜಿತ ಆಂಧ್ರದ ಮಾಜಿ ಸಿಎಂ, ಕರ್ನಾಟಕದ ಮಾಜಿ ಗವರ್ನರ್ ಕೆ.ರೋಸಯ್ಯ ವಿಧಿವಶ

ಶ್ರೇಷ್ಠ ರಾಜಕೀಯ ಮುತ್ಸದ್ಧಿಯಾಗಿದ್ದ ರೋಸಯ್ಯ ಅವರು ರಾಜಕೀಯ ಮೌಲ್ಯಗಳನ್ನು ಎತ್ತಿ ಹಿಡಿಯಲು ಋಷಿಯಂತೆ ದುಡಿಯುತ್ತಿದ್ದರು. ಅವರ ಅಗಲಿಕೆ ದೊಡ್ಡ ನಷ್ಟ. ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಅಗಲಿದ ಚೇತನಕ್ಕೆ ನನ್ನ ಶ್ರದ್ಧಾಂಜಲಿ ಎಂದು ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

Last Updated : Dec 4, 2021, 3:09 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.