ಮೈಸೂರು: ಜಿಲ್ಲೆಯಲ್ಲಿ ಕಳೆದ ರಾತ್ರಿ ಭಾರಿ ಮಳೆಯಾಗಿದ್ದು ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದೆ. ನಂಜನಗೂಡು ಪಟ್ಟಣದ ಹುಲ್ಲಹಳ್ಳಿ ರಸ್ತೆಯ ರೋಟರಿ ಶಾಲೆಗೆ ಹೋಗುವ ತಿರುವಿನಲ್ಲಿ ಬೃಹತ್ ಗಾತ್ರದ ಮರವೊಂದು ಕ್ವಾಲಿಸ್ ಕಾರಿನ ಮೇಲೆ ಬಿದ್ದು, ವಾಹನ ಜಖಂಗೊಂಡಿದೆ.
ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬ ಹಾಗೂ ತಂತಿಗಳು ಕೂಡ ತುಂಡಾಗಿ ಧರೆಗುರುಳಿವೆ. ಅದೃಷ್ಠವಶಾತ್ ಕಾರಿನಲ್ಲಿ ಯಾರೂ ಇಲ್ಲದ ಕಾರಣ ಹಾಗೂ ಮಳೆಯಿಂದಾಗಿ ವಿದ್ಯುತ್ ಕಡಿತಗೊಂಡಿದ್ದರಿಂದ ಹೆಚ್ಚಿನ ದುರಂತ ತಪ್ಪಿದೆ.
ನಡುವಿನಹಳ್ಳಿ ಹಾಗೂ ಗೀಕಳ್ಳಿ ಹುಂಡಿ ಬಳಿ ಸಹ ಬೃಹತ್ ಗಾತ್ರದ ಮರಗಳು ರಸ್ತೆಗೆ ಉರುಳಿದ್ದರಿಂದ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಕೂಡಲೇ ಎಚ್ಚೆತ್ತ ತಾಲೂಕು ಆಡಳಿತ ರಸ್ತೆ ಸಂಚಾರವನ್ನು ಸುಗಮಗೊಳಿಸಿದೆ.
ಇದನ್ನೂ ಓದಿ: ಹೈದರಾಬಾದ್ನಲ್ಲಿ ಅಬ್ಬರಿಸಿದ ಮಳೆರಾಯ: ರಸ್ತೆಗಳು ಜಲಾವೃತ, ಕೆಲವೆಡೆ ವಿದ್ಯುತ್ ಕಡಿತ, ಬೆಳೆಹಾನಿ