ಮೈಸೂರು: ಶಾಟ್೯ ಸರ್ಕ್ಯೂಟ್ ನಿಂದ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಸಿಬ್ಬಂದಿಯ ಮುನ್ನೆಚ್ಚರಿಕೆ ಕ್ರಮದಿಂದ ಸಂಭವನೀಯ ಅನಾಹುತ ತಪ್ಪಿದೆ.
ವಿದ್ಯಾರಣ್ಯಪುರಂನಲ್ಲಿರುವ ರಾಮಕೃಷ್ಣ ಆಸ್ಪತ್ರೆಯಲ್ಲಿ ಶಾಟ್೯ ಸರ್ಕ್ಯೂಟ್ ನಿಂದ ಆಸ್ಪತ್ರೆಯ ನೆಲೆಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಚ್ಚೆತ್ತ ಆಡಳಿತ ಮಂಡಳಿ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿ, ಕೂಡಲೆ ರೋಗಿಗಳನ್ನು ಸ್ಥಳೀಯರ ನೆರವಿನಿಂದ ಹೊರ ತಂದಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತಗೊಳೊಸಿ, ಟಾಚ್೯ ಲೈಟ್ ಮೂಲಕ ಕಾರ್ಯಾಚರಣೆ ಮಾಡಿ ಬೆಂಕಿ ನಂದಿಸಿ ಹೆಚ್ಚಿನ ಅಪಾಯ ತಪ್ಪಿಸಿದ್ದಾರೆ.