ಮೈಸೂರು: ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮನೆ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮೈಸೂರು ತಾಲೂಕಿನಲ್ಲಿ ನಡೆದಿದೆ.
ಭಾನುವಾರ ರಾತ್ರಿ ಸುರಿದ ನಿರಂತರ ಮಳೆಯಿಂದ ಮೈಸೂರು ತಾಲೂಕಿನ ವರುಣ ಹೋಬಳಿಯ ಸೋಮೇಶ್ವರಪುರ ಗ್ರಾಮದ ನಂಜುಂಡಪ್ಪ ಎಂಬುವರ ಮನೆ ಸಂಪೂರ್ಣ ಕುಸಿದು ಬಿದ್ದಿದೆ. ಗೋಡೆಗಳು ಬೀಳಲು ತೊಡಗುತ್ತಿದ್ದಂತೆಯೇ ಎಚ್ಚೆತ್ತ ಕುಟುಂಬಸ್ಥರು, ಮನೆಯಿಂದ ಆಚೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು, ಈ ಬಗ್ಗೆ ಕುಟುಂಬಸ್ಥರು ತಹಶೀಲ್ದಾರರ ಗಮನಕ್ಕೂ ತಂದಿದ್ದಾರೆ.