ಮೈಸೂರು: ಸುತ್ತೂರು ಶ್ರೀಗಳನ್ನು ಭೇಟಿ ಮಾಡಿ ಹುಣಸೂರು ಕ್ಷೇತ್ರದ ನೂತನ ಶಾಸಕ ಹೆಚ್.ಪಿ.ಮಂಜುನಾಥ್ ಆಶೀರ್ವಾದ ಪಡೆದಿದ್ದಾರೆ.
ಹುಣಸೂರು ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ವಿರುದ್ಧ ಗೆದ್ದ ಕಾಂಗ್ರೆಸ್ನ ನೂತನ ಶಾಸಕ ಹೆಚ್.ಪಿ.ಮಂಜುನಾಥ್, ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಮಠಕ್ಕೆ ತೆರಳಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಕೆಲವು ಸಮಯ ಜಿಲ್ಲೆಯ ಬಗ್ಗೆ ಚರ್ಚೆ ನಡೆಸಿ ನಂತರ ಹೆಚ್.ಪಿ.ಮಂಜುನಾಥ್, ಶ್ರೀಗಳಿಗೆ ಗೌರವ ಸಮರ್ಪಣೆ ಮಾಡಿದ್ದಾರೆ.