ETV Bharat / city

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ರಾಜೀನಾಮೆ ವಿಚಾರ: ಸಾ.ರಾ.ಮಹೇಶ್ ಹೇಳಿದ್ದೇನು? - undefined

ಆರೋಗ್ಯ ಸಮಸ್ಯೆಯಿಂದ ಹೆಚ್.ವಿಶ್ವನಾಥ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ತೀರ್ಮಾನ ತೆಗೆದುಕೊಂಡಿರಬಹುದೆಂದು ಸಚಿವ ಸಾ.ರಾ.ಮಹೇಶ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.

ಹೆಚ್.ವಿಶ್ವನಾಥ್
author img

By

Published : Jun 3, 2019, 6:16 PM IST

ಮೈಸೂರು: ಹೆಚ್​ ವಿಶ್ವನಾಥ್ ಅವರಿಗೆ ಆರೋಗ್ಯ ಸಮಸ್ಯೆ ಇದ್ದ ಕಾರಣ ಅವರಿಗೆ ಪಕ್ಷ ಸಂಘಟನೆ ಮಾಡಲು ಆಗುತ್ತಿಲ್ಲ, ಆದ್ದರಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ತೀರ್ಮಾನ ತೆಗೆದುಕೊಂಡಿದ್ದಾರೆಂದು ನನಗೆ ಅನಿಸುತ್ತದೆ ಎಂದು ಸಚಿವ ಸಾ.ರಾ.ಮಹೇಶ್ ಹೇಳಿದರು.

ಇಂದು ತಮ್ಮ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತಾಡಿದ ಸಚಿವ ಸಾ.ರಾ.ಮಹೇಶ್, ವಿಶ್ವನಾಥ್ ಅನುಭವಿ‌ ರಾಜಕಾರಣಿ‌. ಈಗಾಗಲೇ ಎರಡು ಬಾರಿ ರಾಜೀನಾಮೆ ನೀಡುತ್ತೇನೆ ಎಂದು ತೀರ್ಮಾನ ಕೈಗೊಂಡಿದ್ದರು ಎಂಬುದು ಎಲ್ಲರಿಗೂ ತಿಳಿದ ವಿಚಾರ. ನಾಳೆ ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಜೆಡಿಎಸ್ ಶಾಸಕಾಂಗ ಸಭೆ ಕರೆಯಲಾಗಿದ್ದು, ಅಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ . ಪಕ್ಷದಲ್ಲಿ ಒಬ್ಬ ಹಿರಿಯ ಹಿಂದುಳಿದ ನಾಯಕನಾಗಿರುವುದರಿಂದ ಅವರನ್ನು ಮನವೊಲಿಸಲು ಪ್ರಯತ್ನಿಸುತ್ತೇವೆ ಎಂದು ಸಚಿವ ಸಾ.ರಾ.ಮಹೇಶ್ ಹೇಳಿದರು.

ನಾಳೆ ಜೆಡಿಎಸ್ ಶಾಸಕಾಂಗ ಸಭೆ ಕರೆಯಲಾಗಿದ್ದು, ಅಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ

ಮಡಿಕೇರಿಯಲ್ಲಿ ಮೂರು ತಿಂಗಳ ಕಾಲ ಹೋಂ ಸ್ಟೇ ಹಾಗೂ ರೆಸಾರ್ಟ್​ಗಳಲ್ಲಿ ಯಾವುದೇ ಬುಕ್ಕಿಂಕ್ ಮಾಡುವಂತಿಲ್ಲ, ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಬಗ್ಗೆ ಸಚಿವ ಸಾ.ರಾ.ಮಹೇಶ್ ಪ್ರತಿಕ್ರಿಯೆ ನೀಡಿದರು. ಇಂತಹ ತೀರ್ಮಾನವನ್ನು ಸರ್ಕಾರವಾಗಲಿ‌ ಅಥವಾ ಜಿಲ್ಲಾಡಳಿತವಾಗಲಿ ತೆಗೆದುಕೊಂಡಿಲ್ಲ. ಕಳೆದ ಬಾರಿ ಅತಿ ಹೆಚ್ಚು ಭೂ ಕುಸಿತವಾದ ಮಕ್ಕಂದೂರು ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಮಾತ್ರ ಈ ತೀರ್ಮಾನವಾಗಿದ್ದು, ಇದು ಎಲ್ಲಾ ಪಂಚಾಯತಿಗೂ ಅನ್ವಯಿಸುವುದಿಲ್ಲ. ಈ ಬಗೆಗಿನ ವರದಿಗಳ ಬಗ್ಗೆ ಜಿಲ್ಲಾಧಿಕಾರಿ ಸ್ಪಷ್ಟನೆ ನೀಡುತ್ತಾರೆ ಎಂದರು.

ಇನ್ನು ಮಡಿಕೇರಿಯಲ್ಲಿ ಕುಮಾರಸ್ವಾಮಿ ವಾಸ್ತವ್ಯ ಮಾಡುತ್ತಾರೆ ಎಂಬ ಮಾಧ್ಯಮಗಳ ವರದಿಗೆ ಪ್ರತಿಕ್ರಿಯಿಸಿದ ಸಚಿವರು, ಈ ವಿಚಾರವನ್ನು ನಾನು ಸ್ವಾಗತ ಮಾಡುತ್ತೇನೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿಗಳೇ ಬಂದು ಗ್ರಾಮ ವಾಸ್ತವ್ಯ ಮಾಡುವುದರಿಂದ ಜನರಲ್ಲಿ ಇನ್ನೂ ಆತ್ಮ ಸ್ಥೈರ್ಯ ಹೆಚ್ಚಾಗುವುದರ ಜೊತೆಗೆ ಸಣ್ಣ ಪುಟ್ಟ ಸಮಸ್ಯೆಗಳು ಸ್ಥಳದಲ್ಲೇ ಬಗೆಹರಿಯಲಿವೆ ಎಂದು ತಿಳಿಸಿದರು.

Intro:Body:

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ರಾಜೀನಾಮೆ ವಿಚಾರ: ಸಚಿವ ಸಾ.ರಾ.ಮಹೇಶ್ ಹೇಳಿದ್ದೇನು? 

ಮೈಸೂರು: ತಮಗೆ ಆರೋಗ್ಯ ಸಮಸ್ಯೆ ಇರುವುದರಿಂದ ಪಕ್ಷ ಸಂಘಟನೆ ಮಾಡಲು ಕಷ್ಟವಾಗುತ್ತಿದೆ ಎಂದು ಅನೇಕ ಬಾರಿ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಆದ್ದರಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ತೀರ್ಮಾನ ತೆಗೆದುಕೊಂಡಿದ್ದಾರೆಂದು ಅನಿಸುತ್ತದೆ. ಈ ಬಗ್ಗೆ ನಾಳೆ‌ ನಡೆಯಲಿರುವ ಪಕ್ಷದ ಶಾಸಕಾಂಗ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಸಚಿವ ಸಾ.ರಾ.ಮಹೇಶ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.

ಇಂದು ತಮ್ಮ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತಾಡಿದ ಸಚಿವ ಸಾ.ರಾ.ಮಹೇಶ್, ವಿಶ್ವನಾಥ್ ಅನುಭವಿ‌ ರಾಜಕಾರಣಿ‌. ಈಗಾಗಲೇ ಎರಡು ಬಾರಿ ರಾಜೀನಾಮೆ ನೀಡುತ್ತೇನೆ ಎಂದು ತೀರ್ಮಾನ ಕೈಗೊಂಡಿದ್ದರು ಎಂಬುದು ಎಲ್ಲರಿಗೂ ತಿಳಿದ ವಿಚಾರ. ನಾಳೆ ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಜೆಡಿಎಸ್ ಶಾಸಕಾಂಗ ಸಭೆ ಕರೆಯಲಾಗಿದ್ದು, ಅಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ.

ಪಕ್ಷದಲ್ಲಿ ಒಬ್ಬ ಹಿರಿಯ ಹಿಂದುಳಿದ ನಾಯಕನಾಗಿರುವುದರಿಂದ ಅವರನ್ನು ಮನವೊಲಿಸಲು ಪ್ರಯತ್ನಿಸುತ್ತೇವೆ ಎಂದು ಸಚಿವ ಸಾ.ರಾ.ಮಹೇಶ್ ಹೇಳಿದರು.

ಮಡಿಕೇರಿಯಲ್ಲಿ ಮೂರು ತಿಂಗಳ ಕಾಲ ಹೋಂ ಸ್ಟೇ ಹಾಗೂ ರೆಸಾರ್ಟ್​ಗಳಲ್ಲಿ ಯಾವುದೇ ಬುಕ್ಕಿಂಕ್ ಮಾಡುವಂತಿಲ್ಲ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಬಗ್ಗೆ ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವರಾದ ಸಚಿವ ಸಾ.ರಾ.ಮಹೇಶ್ ಪ್ರತಿಕ್ರಿಯೆ ನೀಡಿದರು. ಇಂತಹ ತೀರ್ಮಾನವನ್ನು ಸರ್ಕಾರವಾಗಲಿ‌ ಅಥವಾ ಜಿಲ್ಲಾಡಳಿತವಾಗಲಿ ತೆಗೆದುಕೊಂಡಿಲ್ಲ. ಕಳೆದ ಬಾರಿ ಅತಿ ಹೆಚ್ಚು ಭೂ ಕುಸಿತವಾದ ಮಕ್ಕಂದೂರು ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಮಾತ್ರ ಈ ತೀರ್ಮಾನವಾಗಿದ್ದು, ಇದು ಎಲ್ಲಾ ಪಂಚಾಯತಿಗೂ ಅನ್ವಯಿಸುವುದಿಲ್ಲ. ಈ ಬಗೆಗಿನ ವರದಿಗಳ ಬಗ್ಗೆ ಜಿಲ್ಲಾಧಿಕಾರಿ ಸ್ಪಷ್ಟನೆ ನೀಡುತ್ತಾರೆ ಎಂದರು.

ಇನ್ನು ಮಡಿಕೇರಿಯಲ್ಲಿ ಕುಮಾರಸ್ವಾಮಿ ವಾಸ್ತವ್ಯ ಮಾಡುತ್ತಾರೆ ಎಂಬ ಮಾಧ್ಯಮಗಳ ವರದಿಗೆ ಪ್ರತಿಕ್ರಿಯಿಸಿದ ಸಚಿವರು, ಈ ವಿಚಾರವನ್ನು ನಾನು ಸ್ವಾಗತ ಮಾಡುತ್ತೇನೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿಗಳೇ ಬಂದು ಗ್ರಾಮ ವಾಸ್ತವ್ಯ ಮಾಡುವುದರಿಂದ ಜನರಲ್ಲಿ ಇನ್ನೂ ಆತ್ಮ ಸ್ಥೈರ್ಯ ಹೆಚ್ಚಾಗುವುದರ ಜೊತೆಗೆ ಸಣ್ಣ ಪುಟ್ಟ ಸಮಸ್ಯೆಗಳು ಸ್ಥಳದಲ್ಲೇ ಬಗೆಹರಿಯಲಿವೆ ಎಂದು ತಿಳಿಸಿದರು. 

Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.