ಮೈಸೂರು: ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೇನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಇಂದು ಬೆಳಿಗ್ಗೆ ಸಿದ್ದರಾಮನಹುಂಡಿಯಲ್ಲಿ ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಮಾಜಿ ಸಿಎಂ ಸರಣಿ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಸರ್ವ ಜಾತಿಯ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ. ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕೆಲವು ಮಾಧ್ಯಮಗಳು ಕೂಡಾ ಸಾಥ್ ನೀಡಿರುವುದು ವಿಷಾದನೀಯ ಬೆಳವಣಿಗೆ. ನನ್ನ ಹೇಳಿಕೆಯನ್ನು ತಿರುಚಿರುವುದು ರಾಜ್ಯದ ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳಿಗೆ ಅರ್ಥವಾಗಿರುವ ಕಾರಣಕ್ಕಾಗಿಯೇ ಅವರು ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು ಎಂದು ಸರಣಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:Watch... ಸಿದ್ದರಾಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಸಖತ್ ಸ್ಟೆಪ್ ಹಾಕಿದ ಸಿದ್ದರಾಮಯ್ಯ
ಮುಸ್ಲಿಂ ಹೆಣ್ಣು ಮಕ್ಕಳು ಒಂದು ದುಪಟ್ಟಾ ತಲೆ ಮೇಲೆ ಹಾಕಿಕೊಳ್ಳುತ್ತೇನೆ ಎಂದರೆ ಅದರಲ್ಲಿ ತಪ್ಪೇನು. ಹಿಂದೂ ಹೆಣ್ಣು ಮಕ್ಕಳು ತಲೆಯ ಮೇಲೆ ಬಟ್ಟೆ ಹಾಕಿಕೊಳ್ಳುವುದಿಲ್ಲವೇ, ಸ್ವಾಮೀಜಿಗಳು ತಲೆಯ ಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ. ಅದನ್ನ ನೀವು ಪ್ರಶ್ನೆ ಮಾಡುತ್ತೀರಾ? ಎಂದು ಇಂದು ಬೆಳಿಗ್ಗೆ ಸಿದ್ದರಾಮನಹುಂಡಿಯಲ್ಲಿ ಸಿದ್ದರಾಮಯ್ಯ ಪ್ರಶ್ನಿಸಿದ್ದರು. ಆ ಬಳಿಕ ಈ ಹೇಳಿಕೆ ಚರ್ಚೆಗೆ ಗ್ರಾಸವಾಗಿ ಬಿಜೆಪಿಯ ಕೆಲ ನಾಯಕರು ಹಾಗೂ ಕೆಲ ಸ್ವಾಮೀಗಳು, ಸಿದ್ದರಾಮಯ್ಯ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದರು.
ಇದನ್ನೂ ಓದಿ: ಮುಂದಿನ ಚುನಾವಣೆಯೇ ನನ್ನ ಕೊನೆಯ ಚುನಾವಣೆ: ಸಿದ್ದರಾಮಯ್ಯ
-
ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ. 1/4
— Siddaramaiah (@siddaramaiah) March 25, 2022 " class="align-text-top noRightClick twitterSection" data="
">ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ. 1/4
— Siddaramaiah (@siddaramaiah) March 25, 2022ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ. 1/4
— Siddaramaiah (@siddaramaiah) March 25, 2022
-
ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ, ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. 2/4
— Siddaramaiah (@siddaramaiah) March 25, 2022 " class="align-text-top noRightClick twitterSection" data="
">ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ, ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. 2/4
— Siddaramaiah (@siddaramaiah) March 25, 2022ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ, ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. 2/4
— Siddaramaiah (@siddaramaiah) March 25, 2022