ETV Bharat / city

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಆದೇಶ - allegations on Rohini Sindhuri

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹಲವು ಆರೋಪಗಳನ್ನು ಮಾಡಿರುವ ಶಾಸಕ ಸಾ.ರಾ.ಮಹೇಶ್ ತನಿಖೆ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿದ್ದರು.

Investigation order against Rohini Sindhuri
ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಆದೇಶ
author img

By

Published : May 20, 2022, 11:49 AM IST

ಮೈಸೂರು: ಮೈಸೂರು ಜಿಲ್ಲೆಯ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೇಲಿರುವ ಅಕ್ರಮ ಆರೋಪಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಜೇಮ್ಸ್ ತರಕನ್ ಆದೇಶಿಸಿದ್ದಾರೆ.

Investigation order against Rohini Sindhuri

ರೋಹಿಣಿ ಸಿಂಧೂರಿ ವಿರುದ್ಧ ಬಟ್ಟೆ ಬ್ಯಾಗ್ ಖರೀದಿ, ಪಾರಂಪರಿಕ ಕಟ್ಟಡವಾದ ಜಿಲ್ಲಾಧಿಕಾರಿಗಳ ನಿವಾಸದಲ್ಲಿ ಈಜುಕೊಳ ಹಾಗೂ ಜಿಮ್ ನಿರ್ಮಾಣ, ಕೊರೊನಾದಿಂದಾಗಿ ಮೃತಪಟ್ಟವರ ತಪ್ಪು ಲೆಕ್ಕ ಎಂಬೆಲ್ಲಾ ಆರೋಪಗಳನ್ನು ಮಾಡಿರುವ ಶಾಸಕ ಸಾ.ರಾ.ಮಹೇಶ್ ಸೂಕ್ತ ತನಿಖೆ ನಡೆಸುವಂತೆ ಸರ್ಕಾರವನ್ನು ಆಗ್ರಹಿಸಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ನೀವು ಸೈಟು ಖಾಲಿ ಬಿಟ್ಟಿದ್ದೀರಾ? ಹಾಗಾದ್ರೆ ಎಚ್ಚೆತ್ತುಕೊಳ್ಳಿ! ಸಕ್ರಿಯವಾಗಿದೆ ಕಳ್ಳರ ಗ್ಯಾಂಗ್‌

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ, ಹಿರಿಯ ಐಪಿಎಸ್ ಅಧಿಕಾರಿ ಎನ್.ಜಯರಾಮ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದ್ದು, 30 ದಿನಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.