ಮೈಸೂರು : ಜಿಲ್ಲೆಯಲ್ಲಿ ಜೆಡಿಎಸ್ ಮುಖಂಡನ ಪುತ್ರನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಜೆಡಿಎಸ್ ಮುಖಂಡ ಬೆಳವಾಡಿ ಶಿವಮೂರ್ತಿ ಪುತ್ರ ಪ್ರದೀಪ್ (32) ಎಂಬುವರು ಆತ್ಮಹತ್ಯೆಗೆ ಶರಣಾದವರು. ಗುರುವಾರ ರಾತ್ರಿ ಮರಟಿಕ್ಯಾತನಹಳ್ಳಿಯ ಅಪಾರ್ಟ್ಮೆಂಟ್ನ ಕೊಠಡಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ. ಪ್ರದೀಪ್ ತಂದೆ ಬೆಳವಾಡಿ ಶಿವಮೂರ್ತಿ ಜಿಲ್ಲಾ ಜೆಡಿಎಸ್ ಖಜಾಂಚಿ ಆಗಿದ್ದು, ತಾಯಿ ಭಾಗ್ಯ ಶಿವಮೂರ್ತಿ ಮೈಸೂರು ಜಿಪಂ ಮಾಜಿ ಅಧ್ಯಕ್ಷರಾಗಿದ್ದಾರೆ.
ಆತ್ಮಹತ್ಯೆ ಹಿಂದೆ ಅನುಮಾನದ ಹುತ್ತ : ಈ ಆತ್ಮಹತ್ಯೆ ಹಿಂದೆ ಹಲವಾರು ಅನುಮಾನಗಳು ಹುಟ್ಟಿಕೊಂಡಿವೆ. ಜೊತೆಗೆ ಮಹಿಳಾ ಪೊಲೀಸ್ ಸಬ್ಇನ್ಸ್ಪೆಕ್ಟರ್ ಹೆಸರೂ ಸಹ ಕೇಳಿ ಬಂದಿದೆ. ವಿವಾಹಿತನಾಗಿದ್ದ ಇವರಿಗೆ ಎರಡು ಮಕ್ಕಳಿದ್ದರು. ಆದರೆ, ಮೈಸೂರು ನಗರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಹಿಳಾ ಅವಿವಾಹಿತ ಸಬ್ಇನ್ಸ್ಪೆಕ್ಟರ್ವೊಬ್ಬರ ಪ್ರೇಮದ ಬಲೆಗೆ ಸಿಲುಕಿದ್ದರು ಎನ್ನಲಾಗಿದೆ.
ಆಕೆ ಮದುವೆಯಾಗುವಂತೆ ಪ್ರದೀಪನಿಗೆ ಒತ್ತಡ ಹೇರುತ್ತಿದ್ದರು ಎನ್ನಲಾಗಿದೆ. ಎರಡು ಮಕ್ಕಳಿರುವ ಕಾರಣ ಮದುವೆಯಾಗಲು ನಿರಾಕರಿಸಿದ್ದಾರೆ ಎಂಬ ಮಾಹಿತಿಯೂ ತಿಳಿದು ಬಂದಿದೆ. ನಿನ್ನೆ ರಾತ್ರಿ ತೋಟದಲ್ಲಿ ಕಂಠಪೂರ್ತಿ ಕುಡಿದು ಅಪಾರ್ಟ್‌ಮೆಂಟ್‌ಗೆ ಬಂದಿದ್ದ ಪ್ರದೀಪ್, ಪ್ರಿಯತಮೆಗೆ ವಿಡಿಯೋ ಕಾಲ್ ಮಾಡಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಅಂತಿಮ ದರ್ಶನ ಪಡೆದ ಶಾಸಕ ಸಾ.ರಾ. ಮಹೇಶ್ : ಕೆ.ಆರ್. ಆಸ್ಪತ್ರೆಯ ಶವಾಗಾರಕ್ಕೆ ಆಗಮಿಸಿದ ಶಾಸಕ ಸಾ.ರಾ. ಮಹೇಶ್ ಹಾಗೂ ಎಂಎಲ್‌ಸಿ ಮಂಜೇಗೌಡ ಆತ್ಮಹತ್ಯೆ ಮಾಡಿಕೊಂಡ ಪ್ರದೀಪ್‌ನ ಮರಣೋತ್ತರ ಪರೀಕ್ಷೆ ನಡೆದ ನಂತರ ಅಂತಿಮ ದರ್ಶನ ಪಡೆದರು. ಇನ್ನು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿರುವ ಇಲವಾಲ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ನಾಗಾಲ್ಯಾಂಡ್ ಹತ್ಯೆ ಪ್ರಕರಣ : ಕಾಂಗ್ರೆಸ್ ನಿಯೋಗದಿಂದ ಸೋನಿಯಾ ಗಾಂಧಿಗೆ ವರದಿ ಸಲ್ಲಿಕೆ