ETV Bharat / city

ಹೆಚ್​ಡಿಕೆ ನೇತೃತ್ವದ ಜೆಡಿಎಸ್ ಚಿಂತನ-ಮಂಥನ ಸಭೆಗೆ ಹಾಜರಾಗ್ತಾರಾ ಜಿ.ಟಿ‌.ಡಿ?

author img

By

Published : Sep 12, 2019, 10:28 AM IST

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಖಾಸಗಿ ಹೋಟೆಲ್​ನಲ್ಲಿ ಪಕ್ಷದ ಚಿಂತನ ಮಂಥನ ಸಭೆಯನ್ನು ಕರೆದಿದ್ದು, ಸಭೆಗೆ ಶಾಸಕ ಜಿ.ಟಿ ದೇವೇಗೌಡ ಬರುತ್ತಾರೆಯೇ ಎಂಬ ಪ್ರಶ್ನೆ ಮೂಡಿದೆ.

ಜಿ.ಟಿ ದೇವೇಗೌಡ

ಮೈಸೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಖಾಸಗಿ ಹೋಟೆಲ್​ನಲ್ಲಿ ಪಕ್ಷದ ಚಿಂತನ ಮಂಥನ ಸಭೆಯನ್ನು ಕರೆದಿದ್ದಾರೆ. ಈ ಸಭೆಗೆ ಶಾಸಕ ಜಿ.ಟಿ. ದೇವೇಗೌಡ ಆಗಮಿಸುತ್ತಾರೆಯೇ ಎಂಬ ಪ್ರಶ್ನೆ ಮೂಡಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮೈಸೂರಿನಲ್ಲಿ ಕುಮಾರಸ್ವಾಮಿ ಬೆಳಗ್ಗೆ 11 ಗಂಟೆಗೆ ಖಾಸಗಿ ಹೋಟೆಲ್​ನ ಸಭಾಂಗಣದಲ್ಲಿ ಪಕ್ಕದ ಸಂಘಟನೆ, ಚಿಂತನ-ಮಂಥನ ಸಭೆ ನಡೆಸುತ್ತಿದ್ದು, ಈ ಸಭೆಯಲ್ಲಿ ಶಾಸಕರು, ನಗರ ಪಾಲಿಕೆ ಸದಸ್ಯರು, ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ತಾಲೂಕು​ ಪಂಚಾಯತ್ ಸದಸ್ಯರು, ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ. ಆದರೆ ಜೆಡಿಎಸ್ ಪಕ್ಷದಿಂದ ತಟಸ್ಥರಾಗಿರುವ ಮಾಜಿ ಸಚಿವ ಹಾಗೂ ಹಾಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗವಹಿಸುತ್ತಾರಾ ಎಂಬ ಅನುಮಾನ ಜೆಡಿಎಸ್​ ಮುಖಂಡರಲ್ಲಿದೆ. ಜೊತೆಗೆ ಕುಮಾರಸ್ವಾಮಿ ಅವರು ಜಿ.ಟಿ. ದೇವೇಗೌಡರನ್ನು ಮನವೊಲಿಸುತ್ತಾರೆಯೇ? ಎಂಬುದು ಸಹ ಕುತೂಹಲಕ್ಕೆ ಕಾರಣವಾಗಿದೆ.

ಹುಣಸೂರಿಗೆ ಹೆಚ್.ಡಿ. ದೇವೇಗೌಡ ಭೇಟಿ:

‌ಖಾಸಗಿ ಕಾರ್ಯಕ್ರಮದ ನಿಮಿತ್ತ ಇಂದು 11 ಗಂಟೆಗೆ ಹೆಲಿಕಾಪ್ಟರ್ ಮೂಲಕ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಆಗಮಿಸಲಿದ್ದು, ಈ ಸಂದರ್ಭದಲ್ಲಿ ಹುಣಸೂರು ಉಪಚುನಾವಣೆಗೆ ಸ್ಥಳೀಯ ನಾಯಕರನ್ನು ಆಯ್ಕೆ ಮಾಡುವ ಸಂಬಂಧ ಮಾತುಕತೆ ನಡೆಸಲಿದ್ದಾರೆ. ಜೊತೆಗೆ ಜೆಡಿಎಸ್​ನ ರಾಜ್ಯ ಪ್ರಧಾನ ಕಾರ್ಯದರ್ಶಿ ಹರ್ಷ, ದೇವೇಗೌಡರ ನೇತೃತ್ವದಲ್ಲಿ ಹುಣಸೂರಿನಲ್ಲಿ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಪೂರ್ವಭಾವಿ ಸಭೆ ನಡೆಯಲಿದೆ.

ಇನ್ನು ಮುಂದಿನ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಗ್ಗೆಯೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಹುಡುಕಾಟ ಆರಂಭಿಸಿದ್ದು, ಈ ಎಲ್ಲಾ ಕಾರಣಗಳಿಂದ‌ ಇಂದು ಮಾಜಿ‌ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕರೆದಿರುವ ಸಭೆ ಮಹತ್ವ ಪಡೆದಿದುಕೊಂಡಿದೆ.

Intro:ಮೈಸೂರು: ಖಾಸಗಿ ಹೋಟೆಲ್ ನಲ್ಲಿ ಪಕ್ಷದ ಚಿಂತನ ಮಂಥನ ಸಭೆಯನ್ನು ಕರೆದಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಭೆಗೆ ಶಾಸಕ ಜಿ.ಟಿ.ದೇವೇಗೌಡ ಬರುತ್ತಾರೆಯೇ ಎಂಬ ಪ್ರಶ್ನೆ ಈಗ ಎದ್ದಿದೆ.
Body:

ಮುಖ್ಯಮಂತ್ರಿ ರಾಜೀನಾಮೆ ಬಳಿಕ ಮೈಸೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಇಂದು ೧೧ ಗಂಟೆಗೆ ಖಾಸಗಿ ಹೋಟೆಲ್ ನ ಸಭಾಂಗಣದಲ್ಲಿ ಪಕ್ಕದ ಸಂಘಟನೆ, ಚಿಂತನ-ಮಂಥನ ಸಭೆ ನಡೆಸುತ್ತಿದ್ದು, ಈ ಸಭೆಗೆ ಶಾಸಕರು, ನಗರ ಪಾಲಿಕೆ ಸದಸ್ಯರು, ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ತಾಲ್ಲೂಕು ಪಂಚಾಯತ್ ಸದಸ್ಯರು, ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ.
ಆದರೆ ಈ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದಿಂದ ತಟಸ್ಥರಾಗಿರುವ ಮಾಜಿ ಸಚಿವ ಹಾಗೂ ಹಾಲಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಭಾಗವಹಿಸುತ್ತಾರೆಯೇ ಎಂಬ ಪ್ರಶ್ನೆ ಈಗ ಎದ್ದಿದೆ. ಜೊತೆಗೆ ಕುಮಾರಸ್ವಾಮಿ ಅವರು ಜಿ.ಟಿ.ದೇವೇಗೌಡರನ್ನು ಮನವೊಲಿಸುತ್ತಾರೆಯೇ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ.

ಹುಣಸೂರಿಗೆ ಹೆಚ್.ಡಿ.ದೇವೇಗೌಡ: ‌ಖಾಸಗಿ ಕಾರ್ಯಕ್ರಮದ ನಿಮಿತ್ತ ಇಂದು ೧೧ ಗಂಟೆಗೆ ಹೆಲಿಕಾಪ್ಟರ್ ಮೂಲಕ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಆಗಮಿಸಲಿದ್ದು ಈ ಸಂದರ್ಭದಲ್ಲಿ ಹುಣಸೂರು ಉಪಚುನಾವಣೆಗೆ ಸ್ಥಳೀಯ ನಾಯಕರನ್ನು ಆಯ್ಕೆ ಮಾಡುವ ಸಂಬಂಧ ಮಾತುಕತೆ ನಡೆಸಲಿದ್ದಾರೆ, ಜೊತೆಗೆ ಜೆಡಿಎಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಹರ್ಷ ದೇವೇಗೌಡ ನೇತೃತ್ವದಲ್ಲಿ ಹುಣಸೂರಿನಲ್ಲಿ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಪೂರ್ವಭಾವಿ ಸಭೆ ನಡೆಯಲಿದೆ. ಇದಲ್ಲದೆ ಮುಂದಿನ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಗ್ಗೆಯೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹುಡುಕಾಟ ಆರಂಭಿಸಿದ್ದು ಈ ಎಲ್ಲಾ ಕಾರಣಗಳಿಂದ‌ ಇಂದು ಮಾಜಿ‌ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕರೆದಿರುವ ಮಹತ್ವ ಪಡೆದಿದುಕೊಂಡಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.