ಮೈಸೂರು: ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಮತ್ತಷ್ಟು ಮಳೆಯಾಗುವ ಸಾಧ್ಯತೆಯಿದೆ. ಇದರಿಂದ ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ ನೀರನ್ನು ನದಿಗೆ ಹರಿಸುವ ಸಾಧ್ಯತೆ ಇದೆ.
ಪ್ರಸ್ತುತ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ 10 ಸಾವಿರ ಕ್ಯೂಸೆಕ್ ಇದ್ದು, 2 ಸಾವಿರ ಕ್ಯೂಸೆಕ್ನಿಂದ 5 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡುವ ಸಾಧ್ಯತೆಯಿದೆ.
ಇದರಿಂದಾಗಿ ಕಬಿನಿ ನದಿ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ-ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳಲು ಕೋರಲಾಗಿದೆ. ಕಬಿನಿ ಜಲಾಶಯದ ಕಾರ್ಯಪಾಲಕ ಅಭಿಯಂತರಾದ ಎನ್.ಸುಜಾತ ಪ್ರಕಟಣೆಯಲ್ಲಿ ಈ ಬಗ್ಗೆ ಮನವಿ ಮಾಡಿದ್ದಾರೆ.