ETV Bharat / city

ಮಂಡ್ಯ,ಮೈಸೂರಿನಲ್ಲಿ ಸಮನ್ವಯ ಕೊರತೆ ಇದೆ : ಸಚಿವ ಸಾ.ರಾ.ಮಹೇಶ್ - kannada newspaper

ಮಂಡ್ಯ ಹಾಗೂ ಮೈಸೂರು ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಕೆಲವು ಕಡೆ ಸಮನ್ವಯ ಕೊರತೆ ಏರ್ಪಟ್ಟಿದೆ. ಪಕ್ಷದ ಮುಖಂಡರು ಸಮನ್ವಯ ಸಾಧಿಸುವುದರ ಕಡೆಗೆ ಈಗಾಗಲೇ ಗಮನ ಹರಿಸಿದ್ದಾರೆ‌ ಎಂದು ಮೈಸೂರಿನಲ್ಲಿ ಸಚಿವ ಸಾ.ರಾ.ಮಹೇಶ್ ಹೇಳಿದ್ದಾರೆ.

ಸಚಿವ ಸಾ.ರಾ.ಮಹೇಶ್
author img

By

Published : Apr 3, 2019, 8:51 PM IST

ಮೈಸೂರು: ಮಂಡ್ಯ ಮತ್ತು ಮೈಸೂರಿನಲ್ಲಿ ಕಾಂಗ್ರೆಸ್​ ಮತ್ತು ಜೆಡಿಎಸ್​ ಎರಡು ಪಕ್ಷಗಳ ನಡುವೆ ಸಮನ್ವಯ ಕೊರತೆ ಇದೆ. ಇದನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ ಎಂದು ಸಚಿವ ಸಾ.ರಾ.ಮಹೇಶ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.

ಕಳೆದ ಎರಡು ದಿನಗಳಿಂದ ಕೆ.ಆರ್.ನಗರದಲ್ಲಿ ಮನೆ ಮನೆಗೆ ಹೋಗಿ ಏಕಾಂಗಿಯಾಗಿ ಪ್ರಚಾರ ನಡೆಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಅವರು, ಮಂಡ್ಯ ಹಾಗೂ ಮೈಸೂರು ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಕೆಲವು ಕಡೆ ಸಮನ್ವಯ ಕೊರತೆ ಏರ್ಪಟ್ಟಿದೆ. ಇದನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ ಎಂದರು.

ಹಲವು ವರ್ಷಗಳಿಂದ ಪರಸ್ಪರ ಒಬ್ಬರನ್ನೊಬ್ಬರು ವಿರೋಧಿಸಿಕೊಂಡು ರಾಜಕಾರಣ ಮಾಡುತ್ತಿದ್ದವರು ಏಕಾಏಕಿ ಒಟ್ಟಾಗಿ ಕೆಲಸ ಮಾಡಿ ಎಂದು ಹೇಳಿದರೆ ಇದಕ್ಕೆ ಸ್ವಲ್ಪ ಸಮಯ ಹಿಡಿಯಬಹುದು. ಪಕ್ಷದ ಮುಖಂಡರು ಸಮನ್ವಯ ಸಾಧಿಸುವ ಕಡೆ ಈಗಾಗಲೇ ಗಮನ ಹರಿಸಿದ್ದಾರೆ‌ ಎಂದರು.

ಮಂಡ್ಯ ಜಿಲ್ಲೆಯ ಪಕ್ಷೇತರ ಅಭ್ಯರ್ಥಿಯ ಪರವಾಗಿ ಕೆ.ಆರ್.ನಗರದ ಕೆಲವು ಕಾಂಗ್ರೆಸ್ ಮುಖಂಡರು ಓಡಾಟ ನಡೆಸಿರುವ ಬಗ್ಗೆ ಈಗಾಗಲೇ ಕಾಂಗ್ರೆಸ್ ಮುಖಂಡರಾದ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗಿದೆ. ನಾನು ಇದನ್ನು ಸರಿಪಡಿಸುತ್ತೇನೆ ಎಂದು ಹೇಳಿದ್ದಾರೆ ಎಂದರು.

ಹಳೇ ಮೈಸೂರು ಭಾಗದಲ್ಲಿ ಚುನಾವಣೆಯನ್ನು ಸಿದ್ದರಾಮಯ್ಯ ಅವರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ ಎಲ್ಲಾ ಭಿನ್ನಮತಗಳನ್ನು ಅವರು ಸರಿಪಡಿಸುತ್ತಾರೆ ಎಂದರು.

sample description
ETV Bharat Logo

Copyright © 2025 Ushodaya Enterprises Pvt. Ltd., All Rights Reserved.