ETV Bharat / city

ಮೈಸೂರಿನಲ್ಲಿ ಕಪಿಲಾ ನದಿಗೆ ಹಾರಿ ಪ್ರೇಮಿಗಳ ಆತ್ಮಹತ್ಯೆ ಯತ್ನ - ಕಪಿಲಾ ನದಿಗೆ ಹಾರಿದ ಪ್ರೇಮಿಗಳ ರಕ್ಷಣೆ

ಪ್ರೇಮಿಗಳಿಬ್ಬರು ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರಿನ ನಂಜನಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Lovers suicide attempt and rescued in Mysuru
ಮೈಸೂರಿನಲ್ಲಿ ಕಪಿಲಾ ನದಿಗೆ ಹಾರಿ ಪ್ರೇಮಿಗಳು ಆತ್ಮಹತ್ಯೆಗೆ ಯತ್ನ, ರಕ್ಷಣೆ
author img

By

Published : Dec 1, 2021, 8:58 AM IST

ಮೈಸೂರು: ನಂಜನಗೂಡು ಬಳಿಯ ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳನ್ನು ತೆಪ್ಪ ನಡೆಸುವ ಅಂಬಿಗರು ರಕ್ಷಿಸಿದರು. ಸದ್ಯ, ಇಬ್ಬರಿಗೂ ನಂಜನಗೂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಚಾಮರಾಜನಗರದ 17 ವರ್ಷದ ಅಪ್ರಾಪ್ತೆ ಹಾಗೂ ಚಾಮರಾಜನಗರದ‌‌ ಸೋಮವಾರಪೇಟೆ ಅಭಿ (19) ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು. ಅಪ್ರಾಪ್ತೆ ಚಾಮರಾಜನಗರ ಕಾಲೇಜೊಂದರ ವಿದ್ಯಾರ್ಥಿನಿಯಾಗಿದ್ದು, ಅಭಿ ಪೆಟ್ರೋಲ್ ಬಂಕ್​​ನಲ್ಲಿ ಕೆಲಸ ಮಾಡುತ್ತಿದ್ದಾನೆ.

lovers-suicide-attempt-and-rescued-in-mysuru
ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು

ಇಬ್ಬರ ಪ್ರೀತಿ-ಪ್ರೇಮದ ವಿಚಾರ ತಿಳಿದ ಬಾಲಕಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರೂ ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದ್ದಾರೆ. ಇದೇ ವೇಳೆ ತೆಪ್ಪ ನಡೆಸುತ್ತಿದ್ದ ಅಂಬಿಗರು ಇಬ್ಬರನ್ನೂ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.

ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಪಾರ್ಕ್​​ನಲ್ಲಿ ಲವರ್ಸ್​​​ ಆತ್ಮಹತ್ಯೆ.. ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.