ಮೈಸೂರು: ಮೀನು ಹಿಡಿಯಲು ಹೋಗಿ ವ್ಯಕ್ತಿಯೊಬ್ಬ ಕಬಿನಿ ಹಿನ್ನೀರಿನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಎನ್. ಬೇಗೂರು ಗ್ರಾಮದಲ್ಲಿ ನಡೆದಿದೆ.
ಮಹದೇವ (26) ಮೃತ ವ್ಯಕ್ತಿ. ಈತ ಹಾಗೂ ಈತನ ಮೂವರು ಸ್ನೇಹಿತರು ಕಬಿನಿ ಹಿನ್ನೀರಿನಲ್ಲಿ ಮೀನು ಹಿಡಿಯಲು ಹೋಗಿದ್ದರು. ಮೀನಿನ ಬಲೆಯನ್ನು ನದಿಗೆ ಹಾಕುವ ಸಂದರ್ಭದಲ್ಲಿ ಮಹದೇವ ನದಿಗೆ ಬಿದ್ದು ನೀರಿನಲ್ಲಿ ಮುಳುಗಿದ್ದಾನೆ. ಈ ವೇಳೆ ಈತನ ಮೂವರು ಸ್ನೇಹಿತರು ಗ್ರಾಮಕ್ಕೆ ಬಂದು ವಿಷಯ ತಿಳಿಸಿದ್ದಾರೆ. ಬಳಿಕ ಬೀಚನಹಳ್ಳಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಬಿನಿ ಹಿನ್ನೀರಿನಲ್ಲಿ ಕಾರ್ಯಾಚರಣೆ ನಡೆಸಿದ್ದು, ಮೀನಿನ ಬಲೆಯನ್ನು ಸುತ್ತಿಕೊಂಡಿರುವ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಈ ಸಂಬಂಧ ಬೀಚನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.