ETV Bharat / city

ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದ್ರೋ ನನಗೆ ಗೊತ್ತಿಲ್ಲ.. ಸಚಿವ ಈಶ್ವರಪ್ಪ ವ್ಯಂಗ್ಯ

ಫೆಬ್ರವರಿ 7ರಂದು ಬೆಂಗಳೂರಿನಲ್ಲಿ ಕುರುಬ ಸಮುದಾಯವನ್ನು ಎಸ್​​ಟಿಗೆ ಸೇರಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಬೃಹತ್ ಸಮಾವೇಶದಲ್ಲಿ 10 ಲಕ್ಷ ಜನ ಸೇರಲಿದ್ದಾರೆ. ಕಾಗಿನೆಲೆ ಸ್ವಾಮೀಜಿ ಸಮ್ಮುಖದಲ್ಲಿ ಸಮಾವೇಶ ನಡೆಯಲಿದೆ..

minister-ks-eswarappa
ಸಚಿವ ಕೆಎಸ್​ ಈಶ್ವರಪ್ಪ
author img

By

Published : Jan 17, 2021, 3:56 PM IST

ಮೈಸೂರು : ಏಪ್ರಿಲ್ ನಂತರ ಸಿಎಂ ಬದಲಾವಣೆ ಆಗುತ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಹೇಳಿಕೆಗೆ ಸಚಿವ ಕೆ ಎಸ್​ ಈಶ್ವರಪ್ಪ ಚಾಮುಂಡಿ ಬೆಟ್ಟದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ ಎಸ್​ ಈಶ್ವರಪ್ಪ ಪ್ರತಿಕ್ರಿಯೆ..

ಓದಿ: ಎಸ್​ಟಿ ಮೀಸಲಾತಿ ಹೋರಾಟ: 3ನೇ ದಿನಕ್ಕೆ ಕಾಲಿಟ್ಟ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಪಾದಯಾತ್ರೆ

ಇಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಸಚಿವ ಈಶ್ವರಪ್ಪ, ಬೆಳಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಏಪ್ರಿಲ್ ನಂತರ ಮುಖ್ಯಮಂತ್ರಿಗಳು ಬದಲಾವಣೆ ಆಗುತ್ತಾರೆ ಎಂಬ ಹೇಳಿಕೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಸಿದ್ದರಾಮಯ್ಯ ಯಾವಾಗ ಜ್ಯೋತಿಷಿ ಆದರೋ ಗೊತ್ತಿಲ್ಲ. ಪ್ರತಿ ಸಮಯದಲ್ಲೂ ಒಂದೊಂದು ದಿನಾಂಕವನ್ನು ಕೊಡುತ್ತಾ ಬರುತ್ತಿದ್ದಾರೆ. ಈಗ ಏಪ್ರಿಲ್ ಎಂದು ಹೇಳುತ್ತಿದ್ದಾರೆ, ಅದು ಯಾವುದೂ ನಿಜ ಆಗಲ್ಲ, ಅವರ ಭವಿಷ್ಯ ಪ್ರತಿ ಬಾರಿಯೂ ಸುಳ್ಳಾಗುತ್ತದೆ. ಈಗ ಏಪ್ರಿಲ್, ಮೇ, ಜೂನ್ ಎಂದು ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಇನ್ನು, ಫೆಬ್ರವರಿ 7ರಂದು ಬೆಂಗಳೂರಿನಲ್ಲಿ ಕುರುಬ ಸಮುದಾಯವನ್ನು ಎಸ್​​ಟಿಗೆ ಸೇರಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಬೃಹತ್ ಸಮಾವೇಶದಲ್ಲಿ 10 ಲಕ್ಷ ಜನ ಸೇರಲಿದ್ದಾರೆ. ಕಾಗಿನೆಲೆ ಸ್ವಾಮೀಜಿ ಸಮ್ಮುಖದಲ್ಲಿ ಸಮಾವೇಶ ನಡೆಯಲಿದೆ ಎಂದರು. ಶೀಘ್ರವೇ, ನೂತನ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆ ಆದ ಸದಸ್ಯರಿಗೆ ತರಬೇತಿ ನೀಡಲಾಗುವುದು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.