ETV Bharat / city

ಸಚಿವ ಸಂಪುಟ‌ ವಿಸ್ತರಣೆ ಬಗ್ಗೆ ಗಂಧ ಗಾಳಿ ಗೊತ್ತಿಲ್ಲ: ಸಚಿವ ಸೋಮಶೇಖರ್ - ಸಚಿವ ಸಂಪುಟ‌ ವಿಸ್ತರಣೆ

ಸಚಿವ ಸಂಪುಟ ವಿಸ್ತರಣೆ ಬಗ್ಗೆ ತಮಗೆ ಗಂಧ ಗಾಳಿ ಗೊತ್ತಿಲ್ಲ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ..

minister s t somashekar
ಸಚಿವ ಎಸ್ ಟಿ ಸೋಮಶೇಖರ್
author img

By

Published : Feb 3, 2022, 2:32 PM IST

ಮೈಸೂರು: ನೀವು ಒಬ್ಬ ರಾಂಗ್ ವ್ಯಕ್ತಿಗೆ ಈ ರಿತಿಯ ಪ್ರಶ್ನೆ ಕೇಳುತ್ತಿದ್ದೀರಿ. ಸಂಪುಟ ವಿಸ್ತರಣೆ ಬಗ್ಗೆ ಗಂಧ ಗಾಳಿ ಗೊತ್ತಿಲ್ಲ ಎಂದು ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಚಿವ ಎಸ್ ಟಿ ಸೋಮಶೇಖರ್ ಉತ್ತರಿಸಿದ್ದಾರೆ.

ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್, ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಗಂಧ ಗಾಳಿ ಗೊತ್ತಿಲ್ಲ. ಯಾವುದೇ ಮಾಹಿತಿಯೂ ಇಲ್ಲ. ಮಾಹಿತಿ ಸಿಕ್ಕರೆ ನಿಮಗೆ ತಿಳಿಸುತ್ತೇನೆ. ಸಚಿವ ಸಂಪುಟ ವಿಸ್ತರಣೆ ಸಿಎಂ ಅವರ ಪರಮಾಧಿಕಾರ. ವಿಸ್ತರಣೆಯೂ ಆಗಬಹುದು ಅಥವಾ ಪುನರ್ ರಚನೆಯೂ ಮಾಡಬಹುದು, ಇದರಲ್ಲಿ ನಮ್ಮ ಪಾತ್ರವಿಲ್ಲ ಎಂದರು.

ಸಚಿವ ಎಸ್ ಟಿ ಸೋಮಶೇಖರ್

ಇನ್ನೂ ಸಚಿವರು ಶಾಸಕರ ಫೋನ್ ಕರೆ ಸ್ವೀಕರಿಸುತ್ತಿಲ್ಲ ಎಂಬ ಶಾಸಕರ ಆರೋಪ ಸತ್ಯಕ್ಕೆ ದೂರವಾದದ್ದು. ಕ್ಯಾಬಿನೆಟ್ ಸಭೆಗಳು ಸೇರಿದಂತೆ ಪ್ರಮುಖ ಸಭೆಗಳ ಸಂದರ್ಭದಲ್ಲಿ ಕರೆಗಳನ್ನು ಸ್ವೀಕರಿಸಲು ಸಾಧ್ಯವಾಗುವುದಿಲ್ಲ. ನಂತರ ನಾವೇ ಅಥವಾ ಆಪ್ತ ಸಹಾಯಕ ಅಧಿಕಾರಿಗಳು ಸಂಪರ್ಕಿಸುತ್ತಾರೆ. ಒಂದೆರಡು ಬಾರಿ ಹೀಗೆ ಆಗಿರಬಹುದು ಅಷ್ಟೇ.‌ ಆದರೆ, ಎಲ್ಲ ಸಚಿವರು ಕರೆ ಸ್ವೀಕರಿಸುವುದಿಲ್ಲ ಎಂಬ ಹೇಳಿಕೆ ಸುಳ್ಳು ಎಂದು ಹೇಳಿದರು.

ಇನ್ನೂ ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಪಕ್ಷದಲ್ಲೇ ಬೆಂಕಿ ಹತ್ತಿ ಉರಿಯುತ್ತಿದೆ. ಅಲ್ಲಿಂದಲೇ ಒಬ್ಬೊಬ್ಬರಾಗಿ ಹೊರ ಬರುತ್ತಿದ್ದಾರೆ. ಅದನ್ನು ಸರಿಪಡಿಸಿಕೊಳ್ಳಲಿ ಎಂದರು.

ಇದನ್ನೂ ಓದಿ: ಕೋವಿಡ್ ಎಫೆಕ್ಟ್‌: ರಾಜ್ಯದಲ್ಲಿ ಶಾಲೆ ಅರ್ಧಕ್ಕೆ ಬಿಟ್ಟ ಮಕ್ಕಳ ಸಂಖ್ಯೆಯಲ್ಲಿ ಏರಿಕೆ

ಮೈಸೂರಿನಲ್ಲಿ ಮನೆಮನೆಗೆ ಪೈಪ್ ಲೈನ್ ಮೂಲಕ ಗ್ಯಾಸ್ ಸರಬರಾಜು ಮಾಡುವ ಯೋಜನೆ ವಿಚಾರದಲ್ಲಿ ಉಂಟಾಗಿರುವ ಜಟಾಪಟಿಯನ್ನು ಸದ್ಯದಲ್ಲೇ ಬಗೆಹರಿಸಲಾಗುವುದು. ಈ ಬಗ್ಗೆ ಖುದ್ದು ರಾಜ್ಯಾಧ್ಯಕ್ಷರೇ ಎಲ್ಲರನ್ನೂ ಕರೆದು ಮಾತನಾಡಿದ್ದಾರೆ. ಯಾರು ಅನಗತ್ಯವಾಗಿ ಮಾತನಾಡದಂತೆ ಸೂಚಿಸಿದ್ದಾರೆ. ನಾನು ಅನಗತ್ಯವಾಗಿ ಮಧ್ಯೆ ಪ್ರವೇಶಿಸುವುದಿಲ್ಲ. ಈ ವಿಚಾರದಲ್ಲಿ ಉಂಟಾಗಿರುವ ಗೊಂದಲವನ್ನು ರಾಜ್ಯಾಧ್ಯಕ್ಷರು ಬಗೆಹರಿಸುತ್ತಾರೆ ಎಂದು ಇದೇ ಸಂದರ್ಭದಲ್ಲಿ ಸಚಿವರು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.