ಮೈಸೂರು : ರಂಗಾಯಣದಲ್ಲಿ ಮಾ.20ರವರೆಗೆ ನಡೆಯಲಿರುವ 'ಬಹುರೂಪಿ ರಾಷ್ಟ್ರೀಯ ರಂಗೋತ್ಸವ'ಕ್ಕೆ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶನಿವಾರ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ತಾಯಿ' ಶೀರ್ಷಿಕೆಯಲ್ಲಿ ಹಮ್ಮಿಕೊಂಡಿರುವ ರಂಗೋತ್ಸವ ಕಾರ್ಯಕ್ರಮ ಬಹಳ ಉತ್ತಮವಾಗಿದೆ. 10 ದಿನಗಳ ಕಾಲ ನಾನಾ ನಾಟಕಗಳು, ಕಲಾ ಪ್ರದರ್ಶನ ವೀಕ್ಷಿಸುವ ಅವಕಾಶ ಸಿಕ್ಕಿದೆ ಎಂದರು.

ಉಕ್ರೇನ್ನ್ ನಲ್ಲಿ ಸಿಲುಕಿದ್ದ ತಮ್ಮ ಮಕ್ಕಳು ತಾಯ್ನಾಡಿಗೆ ಮರಳಿದಾಗ ಆ ತಾಯಂದಿರ ಸಂತೋಷಕ್ಕೆ ಪಾರವೇ ಇರಲಿಲ್ಲ. ತಾಯಿ ಎಂಬ ಹೆಸರಿನಲ್ಲಿ ನಡೆಯುತ್ತಿರುವ ರಂಗೋತ್ಸವ ಕಾರ್ಯಕ್ರಮದ ಬಗ್ಗೆ ಎಷ್ಟು ಹೇಳಿದರು ಸಾಲದು ಎಂದು ಸಚಿವರು ಬಣ್ಣಿಸಿದರು.

ಇದಕ್ಕೂ ಮುನ್ನ ಕರಕುಶಲ ಮೇಳಕ್ಕೆ ಚಾಲನೆ ನೀಡಿದರು. ಈ ವೇಳೆ ಪದ್ಮಶ್ರೀ ಪ್ರಶಸ್ತಿ ಪುರಸ್ಕ್ರತೆ ವೃಕ್ಷಮಾತೆ ತುಳಸಿಗೌಡ, ಶಾಸಕ ನಾಗೇಂದ್ರ, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷ ಅಪ್ಪಣ್ಣ, ಮೂಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ ಎನ್.ವಿ.ಪಣೀಶ್, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೃಷ್ಣಪ್ಪ ಗೌಡ, ಕಾಡಾ ಅಧ್ಯಕ್ಷ ಶಿವಲಿಂಗಯ್ಯ, ನಟಿ ಮಾಳವೀಕಾ, ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
