ETV Bharat / city

ಮೈತ್ರಿ ಸರ್ಕಾರದ ಪತನಕ್ಕೆ ಕಾರಣ ಯಾರು ಎಂಬುದು HDKಗೆ ಚೆನ್ನಾಗಿ ಗೊತ್ತಿದೆ: ಸಚಿವ ಸೋಮಶೇಖರ್ - Ktk minister

ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣ ಯಾರು ಎಂದು ಅವರಿಗೆ ಚೆನ್ನಾಗಿ ಗೊತ್ತಿದೆ. ‌ಈ ವಿಚಾರವನ್ನು ‌ಬಂಡವಾಳವಾಗಿ ಅವರು ತೆಗೆದುಕೊಳ್ಳುತ್ತಿದ್ದು, ಅದರಲ್ಲಿ ನಮಗೆ ಆಸಕ್ತಿ ಇಲ್ಲ..

Mysore
ಮೈಸೂರು
author img

By

Published : Oct 12, 2021, 7:31 PM IST

ಮೈಸೂರು: ಮೈತ್ರಿ ಸರ್ಕಾರದ ಪತನಕ್ಕೆ ಕಾರಣ ಯಾರು ಎಂದು ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನಾಗಿ ಗೊತ್ತಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್ ತಿರುಗೇಟು..

ಇಂದು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, 23 ಸಚಿವರನ್ನು ಬೀದಿಗೆ ತಂದರು ಎಂಬ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ನಾವ್ಯಾರು ಬೀದಿಗೆ ಬಿದ್ದಿಲ್ಲ. ‌ಬಿಜೆಪಿಗೆ ಸೇರ್ಪಡೆಗೊಂಡು, ಶಾಸಕರಾಗಿದ್ದೇವೆ. ಒಂದೊಂದು ಜಿಲ್ಲೆಯ ಉಸ್ತುವಾರಿ ತೆಗೆದುಕೊಂಡು ಸಚಿವರಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.

ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣ ಯಾರು? ಎಂದು ಅವರಿಗೆ ಚೆನ್ನಾಗಿ ಗೊತ್ತಿದೆ. ‌ಈ ವಿಚಾರವನ್ನು ‌ಬಂಡವಾಳವಾಗಿ ಅವರು ತೆಗೆದುಕೊಳ್ಳುತ್ತಿದ್ದು, ಅದರಲ್ಲಿ ನಮಗೆ ಆಸಕ್ತಿ ಇಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಟಾಂಗ್​​​​ ಕೊಟ್ಟರು.

ದಕ್ಷಿಣ ಪದವೀಧರರ ಕ್ಷೇತ್ರ ಗೆಲ್ಲುವ ವಿಶ್ವಾಸ

ಮುಂಬರುವ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಗೆ ಈಗಾಗಲೇ ಸಿದ್ದತೆ ಮಾಡಿಕೊಂಡಿದ್ದು, ಇಂದು ಮೈಸೂರಿನಲ್ಲಿ ಕೋರ್ ಕಮಿಟಿ ಸಭೆಯನ್ನು ನಡೆಸಲಾಗಿದೆ. ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಜಿಲ್ಲೆಗಳ ಉಸ್ತುವಾರಿ ಸಚಿವರ ಜೊತೆ ಸಭೆ ನಡೆಸಿ, ಮುಂಬರುವ ಪದವೀಧರ ಕ್ಷೇತ್ರದ ಚುನಾವಣೆ ಗೆಲ್ಲಲು ಕಾರ್ಯತಂತ್ರ ರೂಪಿಸಲಾಗಿದೆ.

ದಕ್ಷಿಣ ಪದವೀಧರ ಕ್ಷೇತ್ರಕ್ಕೆ 7 ಜನ ಅಭ್ಯರ್ಥಿಗಳು ಟಿಕೆಟ್ ಆಕಾಂಕ್ಷೆಗಳಾಗಿದ್ದು, ಅವರು ಇಂದು ಕೋರ್ ಕಮಿಟಿ ಸಭೆಗೆ ನಮಗೆ ಟಿಕೆಟ್ ನೀಡುವಂತೆ ಮನವಿ ಸಲ್ಲಿಸಿದರು ಎಂದು ಸಚಿವರು ಇದೇ ವೇಳೆ, ತಿಳಿಸಿದರು.

ಇದನ್ನೂ ಓದಿ: 'ಪುಟಗೋಸಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಮೈತ್ರಿ ಸರ್ಕಾರ ಕೆಡವಿದರು': ಕುಮಾರಸ್ವಾಮಿ ವಾಗ್ದಾಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.