ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀಮತಿ ಶಿಲ್ಪ ನಾಗ್, ಅತ್ಯಂತ ದಕ್ಷತೆಯಿಂದ ಪ್ರಾಮಾಣಿಕತೆಯಿಂದ ಮೈಸೂರಿನಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರ ರಾಜೀನಾಮೆಯನ್ನು ಸರ್ಕಾರ ಯಾವ ಕಾರಣಕ್ಕೂ ಅಂಗೀಕಾರ ಮಾಡುವುದಿಲ್ಲ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಓದಿ: ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪ: ಕಣ್ಣೀರಲ್ಲೇ ರಾಜೀನಾಮೆ ನೀಡಿದ ಆಯುಕ್ತೆ ಶಿಲ್ಪಾ ನಾಗ್
ಶಿಲ್ಪ ನಾಗ್ ಅವರು ಸೇವೆಯಲ್ಲಿ ಮುಂದುವರಿಯುವಂತೆ ಮನವೊಲಿಸಲಾಗುವುದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡುತ್ತೇನೆ. ಶುಕ್ರವಾರ ನಾನು ಮೈಸೂರು ಪ್ರವಾಸ ಕೈಗೊಂಡಿದ್ದು, ಆ ವೇಳೆ ಖುದ್ದು ಭೇಟಿಯಾಗಿ ಮಾತನಾಡುತ್ತೇನೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಓದಿ: ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಆರೋಪಕ್ಕೆ ಡಿಸಿ ಸಿಂಧೂರಿ ಸ್ಪಷ್ಟನೆ ಹೀಗಿದೆ..
ಈ ಬಗ್ಗೆ ಸಿಎಸ್ ಮತ್ತು ರಮಣರೆಡ್ಡಿ ಅವರ ಗಮನಕ್ಕೆ ತರಲಾಗಿದ್ದು, ಸಿಎಸ್ ಕೂಡಾ ಮೈಸೂರಿಗೆ ತೆರಳಿ ಪ್ರಕರಣದ ಬಗ್ಗೆ ಕ್ರಮವಹಿಸುತ್ತಾರೆ. ಡಿಸಿ ಕಿರುಕುಳ ವಿಚಾರ ಸಿಎಂ ಗಮನಕ್ಕೂ ತರಲಾಗಿದೆ. ನಾಳೆ ನಾನು ಮೈಸೂರಿಗೆ ತೆರಳಿ ಮುಂದಿನ ಕ್ರಮ ಕೈಗೊಳ್ಳುತ್ತೇನೆ. ನಾಳೆ ನಾನೇ ಮೈಸೂರಿಗೆ ತೆರಳಿ ಎಲ್ಲವನ್ನು ಸರಿ ಮಾಡೋ ಕೆಲಸ ಮಾಡುತ್ತೇನೆ ಎಂದರು.