ETV Bharat / city

ಸದ್ಯಕ್ಕೆ ಪೊಲೀಸ್ ಅಧಿಕಾರಿಗಳ ತಲೆದಂಡ ಇಲ್ಲ: ಸಚಿವ ಎಸ್.ಟಿ.ಸೋಮಶೇಖರ್ - ದಸರಾ ಬಗ್ಗೆ ಎಸ್​.ಟಿ.ಸೋಮಶೇಖರ್ ಮಾತು

ಚಿನ್ನಾಭರಣ ದರೋಡೆ ಹಾಗೂ ಗ್ಯಾಂಗ್ ರೇಪ್ ಪ್ರಕರಣ ಪತ್ತೆ ಹಚ್ಚುವಲ್ಲಿ ಮೈಸೂರು ಪೊಲೀಸರು ದಕ್ಷತೆಯಿಂದ ಕೆಲಸ ಮಾಡಿದ್ದಾರೆ, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

minitser st somashekar on gang rape, gold theft and dasara
ಸದ್ಯಕ್ಕೆ ಪೊಲೀಸ್ ಅಧಿಕಾರಿಗಳ ತಲೆದಂಡ ಇಲ್ಲ: ಸಚಿವ ಎಸ್.ಟಿ. ಸೋಮಶೇಖರ್
author img

By

Published : Aug 31, 2021, 1:38 PM IST

ಮೈಸೂರು: ಚಿನ್ನಾಭರಣ ಪತ್ತೆ ಮತ್ತು ಗ್ಯಾಂಗ್ ರೇಪ್​ ಪ್ರಕರಣಗಳಲ್ಲಿ ಮೈಸೂರು ಪೊಲೀಸರು ದಕ್ಷತೆ ಮೆರೆದಿದ್ದಾರೆ. ಸದ್ಯಕ್ಕೆ ಪೊಲೀಸ್ ಅಧಿಕಾರಿಗಳ ತಲೆದಂಡ ಮಾಡುವುದಿಲ್ಲ. ಇನ್ನು ಮುಂದೆ ಈ ರೀತಿ ಘಟನೆಗಳು ಆಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಸಚಿವ ಎಸ್.ಟಿ. ಸೋಮಶೇಖರ್

ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಈ ಬಾರಿ ದಸರಾವನ್ನು ಯಾವ ರೀತಿ ಮಾಡಬೇಕು ಎಂಬ ಬಗ್ಗೆ ಚರ್ಚಿಸಲು ಸೆಪ್ಟೆಂಬರ್ 3ರಂದು ದಸರಾ ಉನ್ನತ ಮಟ್ಟದ ಸಭೆ ಕರೆದಿದ್ದು, ಅಲ್ಲಿ ಕೂಲಂಕಷವಾಗಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಆ ನಂತರ ಸೆಪ್ಟೆಂಬರ್ 8ರಂದು ಮೈಸೂರಿನಲ್ಲಿ ಜಿಲ್ಲಾಮಟ್ಟದ ಸಭೆ ಮಾಡಿ ಕೊರೊನಾದ ಬಗ್ಗೆ ಚರ್ಚಿಸಿ ಯಾವ ರೀತಿ ದಸರಾ ಮಾಡಬೇಕು ಎಂಬುದನ್ನು ತೀರ್ಮಾನ ಕೈಗೊಳ್ಳುತ್ತೇವೆ. ನಿನ್ನೆ ನಡೆದ ಸಿಎಂ ಸಭೆಯಲ್ಲಿ ನಾನು ಸಹ ಇದ್ದೆ. ಕೊರೊನಾ ಕೇಸ್​​ಗಳು ನೂರು ದಾಟುತ್ತಿಲ್ಲ. ಆದ್ದರಿಂದ ವೀಕೆಂಡ್ ಕರ್ಫ್ಯೂವನ್ನು ತೆಗೆಯುವಂತೆ ಮನವಿ ಮಾಡಿದ್ದೆ. ಅದರಂತೆ ವೀಕೆಂಡ್ ಕರ್ಫ್ಯೂ ತೆಗೆದಿದ್ದಾರೆ ಎಂದರು.

ಚಿನ್ನಾಭರಣ ದರೋಡೆ ಹಾಗೂ ಗ್ಯಾಂಗ್ ರೇಪ್ ಪ್ರಕರಣ ಪತ್ತೆ ಹಚ್ಚುವಲ್ಲಿ ಮೈಸೂರು ಪೊಲೀಸರು ದಕ್ಷತೆಯಿಂದ ಕೆಲಸ ಮಾಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ನಡುವೆ ತಮಿಳುನಾಡಿನ ಪುಂಡ ಪೋಕರಿಗಳು ಮೈಸೂರಿಗೆ ಬಂದು ದರೋಡೆ ಮಾಡುತ್ತೇವೆ, ರೇಪ್ ಮಾಡುತ್ತೇವೆ ಎಂದು ಹೇಳಿದರೆ ಪೊಲೀಸರು ಎಚ್ಚೆತ್ತುಕೊಳ್ಳಬೇಕಾಗುತ್ತದೆ ಎಂದು ಸಚಿವರು ಸಲಹೆ ನೀಡಿದರು.

ಸಾಂಸ್ಕೃತಿಕ ನಗರಿಯಲ್ಲಿ ಜನ ವಿಶ್ವಾಸವಿಟ್ಟಿದ್ದಾರೆ. ಆ ವಿಶ್ವಾಸಕ್ಕೆ ಧಕ್ಕೆಯಾಗದ ರೀತಿ ಹಾಗೂ ಪ್ರಕರಣ ಮರುಕಳಿಸದ ರೀತಿ ಕೆಲಸ ಮಾಡಬೇಕಾಗಿದೆ. ಸದ್ಯಕ್ಕೆ ಪೊಲೀಸ್ ಅಧಿಕಾರಿಗಳ ತಲೆದಂಡ ಇಲ್ಲ. ನಗರದಲ್ಲಿ ಹಾಗೂ ನಗರದ ಹೊರಭಾಗದಲ್ಲಿ ಪೊಲೀಸರು ಗಸ್ತು ಹೆಚ್ಚಿಸಬೇಕು ಎಂದು ಸಚಿವರು ಸೂಚನೆ ನೀಡಿದರು.

ಇದನ್ನೂ ಓದಿ: ಕೇರಳದ ಕೋವಿಡ್ ಏರಿಕೆ ಬಿಸಿ.. ಬೆಂಗಳೂರಿಗೆ ನಗರಕ್ಕೆ ಕೆಲ ನಿರ್ಬಂಧಗಳ ಅಗತ್ಯವಿದೆ: ಗೌರವ್ ಗುಪ್ತಾ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.