ಮೈಸೂರು: ವೀಕೆಂಡ್ ಕರ್ಫ್ಯೂಗೆ ಮೈಸೂರು ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯ ಗಡಿ ಭಾಗದಲ್ಲಿ ಕಟ್ಟು ನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ.
ಕೋವಿಡ್ 3ನೇ ಅಲೆಯ ಭೀತಿ ಹಿನ್ನೆಲೆ ಗಡಿ ಭಾಗದ ಜಿಲ್ಲೆಗಳಲ್ಲಿ ಇಂದಿನಿಂದ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಮೈಸೂರು - ಕೇರಳ ಗಡಿ ಭಾಗವಾದ ಬಾವಲಿ ಚೆಕ್ಪೋಸ್ಟ್ಗೆ ಇಂದು ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇನ್ನು ನಗರದಲ್ಲಿ ವೀಕೆಂಡ್ ಕರ್ಫ್ಯೂಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ದೇವರಾಜ ಮಾರುಕಟ್ಟೆ ಹಾಗೂ ಇತರ ಸ್ಥಳಗಳಲ್ಲಿ ಜನರ ಓಡಾಟ ಸಾಮಾನ್ಯವಾಗಿತ್ತು. ಈ ಬಗ್ಗೆ ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.