ಮೈಸೂರು: ಇಂದಿರಾ ಕ್ಯಾಂಟೀನ್ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಶಾಸಕರು ದಿಢೀರ್ ಭೇಟಿ ನೀಡಿ ಸ್ವತಃ ತಿಂಡಿ ತಿಂದು ಪರಿಶೀಲನೆ ನಡೆಸಿದ್ದಾರೆ.
ಜಿಲ್ಲೆಯ ಹೆಚ್ ಡಿ ಕೋಟೆ ಪಟ್ಟಣದಲ್ಲಿ ಇರುವ ಇಂದಿರಾ ಕ್ಯಾಂಟೀನ್ಗೆ ಸ್ಥಳೀಯ ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ಭೇಟಿ ನೀಡಿ ಕ್ಯಾಂಟೀನ್ನ ಸ್ವಚ್ಛತೆ ಹಾಗೂ ಆಹಾರದ ಗುಣಮಟ್ಟವನ್ನು ಪರಿಶೀಲನೆ ಮಾಡಿ ಸ್ವತಃ ಉಪಹಾರ ಸೇವಿಸಿದರು.
ನಂತರ ಕ್ಯಾಂಟೀನ್ ಮಾಲೀಕರಿಗೆ ಸ್ವಚ್ಛತೆ ಹಾಗೂ ಆಹಾರದ ಗುಣಮಟ್ಟವನ್ನು ಕಾಪಾಡುವಂತೆ ಎಚ್ಚರಿಕೆ ನೀಡಿದರು. ಇದೇ ವೇಳೆ ಶಾಸಕರಿಗೆ ಪುರಸಭೆಯ ಆರೋಗ್ಯ ಅಧಿಕಾರಿಗಳು ಸಾಥ್ ನೀಡಿದರು.