ಮೈಸೂರು: ಜೆಡಿಎಸ್ ತೊರೆದು ಬಿಜೆಪಿಗೆ ಸೇರುವುದಾಗಿ ಹೇಳಿದ್ದ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ (MLC Sandesh Nagaraj) ಅವರು ತಾವು ಈ ಬಾರಿ ವಿಧಾನ ಪರಿಷತ್ ಚುನಾವಣೆಗೆ (Karnataka legislative council Election) ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸಂದೇಶ್ ನಾಗರಾಜ್, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದೆ. ಆದರೆ, ಪಕ್ಷದ ನಿಯಮದಂತೆ ವಯೋಮಿತಿಯ ಕಾರಣಕ್ಕೆ ಟಿಕೆಟ್ ಕೈ ತಪ್ಪಿದೆ. ನನಗೆ ಟಿಕೆಟ್ ನೀಡಲು ಶ್ರಮಿಸಿದ ಎಲ್ಲರಿಗೂ ವಂದಿಸುತ್ತೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಜೆಡಿಎಸ್ಗೆ ಗುಡ್ ಬೈ - ಮೂರು ದಿನದಲ್ಲಿ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆ: ಸಂದೇಶ್ ನಾಗರಾಜ್
ಟಿಕೆಟ್ ಪಡೆಯಲು ಹರಸಾಹಸ ಪಟ್ಟಿದ್ದ ನಾಗರಾಜ್
ಜೆಡಿಎಸ್ ಕೈಬಿಟ್ಟು ಬಿಜೆಪಿ ಸೇರ್ಪಡೆ ಸಜ್ಜಾಗಿದ್ದ ಸಂದೇಶ್ ನಾಗರಾಜ್ಗೆ ಬಿಜೆಪಿಯಿಂದ ಟಿಕೆಟ್ ಸಿಗಲ್ಲ ಅಂತಾ ಗೊತ್ತಾಗುತ್ತಿದ್ದಂತೆಯೇ ಮತ್ತೆ ಜೆಡಿಎಸ್ ಕದ ತಟ್ಟಿದ್ದರು. ಆದರೆ, ಹೆಚ್.ಡಿ ಕುಮಾರಸ್ವಾಮಿಯವರು ಇದಕ್ಕೆ ಒಪ್ಪಿಗೆ ನೀಡಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಎರಡೂ ಕಡೆಯಿಂದ ಈಗ ನಾಗರಾಜ್ಗೆ ಟಿಕೆಟ್ ಕೈತಪ್ಪಿದ್ದು, ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
ಇದನ್ನೂ ಓದಿ: Council election: ಕೊನೆಗೂ ಜೆಡಿಎಸ್ನಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಏಳು ಕ್ಷೇತ್ರಗಳಲ್ಲಿ ಮಾತ್ರ ಕಣಕ್ಕೆ