ಮೈಸೂರು: ಕೌಟುಂಬಿಕ ಕಲಹದಿಂದ ಮನನೊಂದ ತಾಯಿ ತನ್ನ ಮಗುವಿನ ಕತ್ತು ಕುಯ್ದು ತಾನೂ ಕತ್ತನ್ನು ಕುಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣದ ಹೆಮ್ಮಿಗೆ ಗ್ರಾಮದಲ್ಲಿ ನಡೆದಿದೆ.
ತನ್ನ 3 ವರ್ಷದ ಹೆಣ್ಣು ಮಗು ಮನಹಾ ಬಾನು ಕತ್ತು ಕುಯ್ದು ಸೀಮಾ ಬಾನು (25)ತಾನೂ ಕತ್ತು ಕುಯ್ದುಕೊಂಡು ಸಾವನ್ನಪ್ಪಿದ್ದಾಳೆ. ಪ್ರೀತಿಸಿ ಮದುವೆಯಾಗಿದ್ದ ಈಕೆ ಇತ್ತೀಚಿಗೆ ಕೌಟುಂಬಿಕ ಕಲಹದಿಂದ ಮನನೊಂದು ಈ ಕೃತ್ಯ ಮಾಡಿದ್ದಾಳೆ ಎನ್ನಲಾಗಿದೆ.
ಸ್ಥಳಕ್ಕೆ ಪಿರಿಯಾಪಟ್ಟಣ ಗ್ರಾಮಾಂತರ ಪೊಲೀಸರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ.