ಮೈಸೂರು: ಮೈಸೂರು ರೈಲ್ವೆ ನಿಲ್ದಾಣ ಹಾಗೂ ಮೈಸೂರು ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡುವಂತೆ ಸಂಸದ ಪ್ರತಾಪಸಿಂಹ ಅವರು ಪತ್ರ ಬರೆದು ಸಿಎಂ ಬಿಎಸ್ವೈ ಮತ್ತು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ.
ಮೈಸೂರು ರೈಲ್ವೆ ನಿಲ್ದಾಣವನ್ನು ನಾಲ್ವಡಿ ಕೃಷ್ಣರಾಜ ಒಡೆಯರ್, ಮೈಸೂರು ಜಂಕ್ಷನ್ ಎಂದು ಮರುನಾಮಕರಣ ಮಾಡುವಂತೆ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪ್ರತಾಪ್ ಸಿಂಹ ಪತ್ರ ಬರೆದಿದ್ದಾರೆ.
ಜೊತೆಗೆ ಮೈಸೂರು ವಿಮಾನ ನಿಲ್ದಾಣವನ್ನು ಜಯಚಾಮರಾಜ ಒಡೆಯರ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡುವಂತೆ ಕೋರಿ ಕೇಂದ್ರ ವಿಮಾನಯಾನ ಸಚಿವ ಹರದೀಪ್ ಸಿಂಗ್ ಪುರಿ, ಅವರಿಗೆ ಸಂಸದ ಪ್ರತಾಪಸಿಂಹ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಇದನ್ನೂ ಓದಿ: UNLOCK 3.0 ಮುಖ್ಯಾಂಶಗಳು: ಜುಲೈ 5 ರಿಂದ ರಾಜ್ಯದಲ್ಲಿ ಯಾವುದಕ್ಕೆಲ್ಲಾ ಅವಕಾಶ?