ETV Bharat / city

ಮಂಡಿ ನೋವು ಅಂತ ಸಿಎಂ ಬದಲಾಯಿಸಲು ಸಾಧ್ಯವಿಲ್ಲ: ಪ್ರತಾಪ್ ಸಿಂಹ

author img

By

Published : Dec 29, 2021, 2:05 PM IST

Updated : Dec 29, 2021, 2:15 PM IST

ಬಸವರಾಜ ಬೊಮ್ಮಾಯಿಯವರಿಗೆ ಮಂಡಿ ನೋವು ಎಂದು ಸಿಎಂ ಸ್ಥಾನವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಸ್ಪಷ್ಟಪಡಿಸಿದರು.

mp prathap simha
ಸಂಸದ ಪ್ರತಾಪ್ ಸಿಂಹ

ಮೈಸೂರು: ಮಂಡಿ ನೋವು ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬದಲಾಯಿಸಲು ಸಾಧ್ಯವಿಲ್ಲ. ಮಂಡಿ ನೋವಿಗೆ ಚಿಕಿತ್ಸೆ ಕೊಡಿಸುತ್ತೇವೆ, ಆದರೆ ಸಿಎಂ ಬದಲಾಯಿಸುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಇಂದು ಮೈಸೂರು ಜಿಲ್ಲಾ ಪಂಚಾಯತ್​ನಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು.

ವಿಧಾನಸೌಧ ಕಟ್ಟಡದಲ್ಲಿ ವಾಸ್ತು ದೋಷವಿದೆ. ಸಿಎಂ ಬಿಟ್ಟು ಉಳಿದ 223 ಜನರಿಗೂ ಸಿಎಂ ಆಗಬೇಕು ಎಂಬ ಆಸೆ ಇರುತ್ತದೆ. ಹಾಗಾಗಿ ಇಂತಹ ಮಾತುಗಳು ಕೇಳಿ ಬರುತ್ತವೆ ಎಂದರು.

ನಾಯಕತ್ವ ಬದಲಾವಣೆ ಕೇವಲ ಊಹಾಪೋಹ:

ಮಾಜಿ‌ ಪ್ರಧಾನಿ ವಾಜಪೇಯಿ ಅವರಿಗೂ ಎರಡೂ ಮಂಡಿಗಳಲ್ಲಿ ನೋವು ಇತ್ತು. ಆದರೆ ಪ್ರಧಾನಿಯನ್ನೇ ನಾವು ಬದಲಾಯಿಸಲಿಲ್ಲ, ಇನ್ನು ಸಿಎಂ ಬದಲಾಯಿಸುತ್ತೇವಾ?. ಇದೊಂದು ಉಹಾಪೊಹ ಅಷ್ಟೇ ಎಂದರು.

ರಂಗಾಯಣ ನಿರ್ದೇಶಕರ ಪರ ಬ್ಯಾಟಿಂಗ್:

ರಂಗಾಯಣ ನಿರ್ದೇಶಕರನ್ನು ವಜಾ ಮಾಡುವಂತೆ ಪ್ರತಿಭಟನೆಗಳು ನಡೆಯುತ್ತಿರುವುದು ಸರಿಯಲ್ಲ. ರಂಗಾಯಣದಲ್ಲಿ ಬಹುಕಾಲದಿಂದಲೂ ಎಡಪರರ ಹಾವಳಿಯಿತ್ತು. ಇದು ಎಡಪಂಥೀಯರ ಸ್ವತ್ತು ಎನ್ನುವ ರೀತಿಯಾಗಿದೆ. ರಂಗಾಯಣದ ಬಗ್ಗೆ ಅಪಪ್ರಚಾರ ಮಾಡಬೇಡಿ, ನಿಮಗೆ ಅವಕಾಶ ಸಿಗುತ್ತಿಲ್ಲ ಎಂದರೆ ಅವಕಾಶ ಕೊಡಿಸುತ್ತೇವೆ ಎಂದರು.

ರಂಗಾಯಣ ನಿರ್ದೇಶಕರ ವಿರುದ್ಧದ ಪ್ರತಿಭಟನೆಗೆ ಕಾಂಗ್ರೆಸ್ ನಾಯಕರ ಬೆಂಬಲದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಂಸದರು, ಟೆರರಿಸ್ಟ್​​ಗಳಿಗೆ ಬೆಂಬಲ ಕೊಟ್ಟವರು ಇವರಿಗೆ ಬೆಂಬಲ ಕೊಡದೆ ಇರುತ್ತಾರೆಯೇ? ಎಲ್ಲಾ ದೇಶದ್ರೋಹ ಚಟುವಟಿಕೆಗಳ ಹಿಂದೆ ಕಾಂಗ್ರೆಸ್ ಇರುತ್ತದೆ. ಈಗಿನ ರಂಗಾಯಣ ನಿರ್ದೇಶಕರಾದ ಅಡ್ಡಂಡ ಕಾರ್ಯಪ್ಪ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಕೆಲಸ ಮಾಡಲು ಅವಕಾಶ ಮಾಡಿಕೊಡಿ ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ:

ಅಧಿಕಾರಕ್ಕೆ ಬಂದರೆ ಮತಾಂತರ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯುತ್ತೇವೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾಲಿಬಾನ್ ಮಾದರಿಯ ಸರ್ಕಾರ ಎಂಬುದು ಜನರಿಗೆ ಗೊತ್ತಿದೆ. ಕಾಂಗ್ರೆಸ್ ಮುಂದೆ ಅಧಿಕಾರಕ್ಕೆ ಬರುವುದಿಲ್ಲ. 2023ರಲ್ಲೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದರು.

ಕಾಂಗ್ರೆಸ್ ಹಿರಿಯ ನಾಯಕರು ಪ್ರತಿ ಬಾರಿಯೂ ಹೊಸ ಕ್ಷೇತ್ರವನ್ನು ಹುಡುಕುವ ಪರಿಸ್ಥಿತಿ ಬಂದಿದೆ. ಇಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವೇ? ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಹೆಸರು ಹೇಳದೇ ಟೀಕಿಸಿದರು.

ಇದನ್ನೂ ಓದಿ: ಬೆಳಗಾವಿ : ಪ್ರತಿಭಟನೆಗೆ ಮುಂದಾದ ವಾಟಾಳ್​​ ನಾಗರಾಜ್ ಸೇರಿ ಹಲವು ಹೋರಾಟಗಾರರು ಖಾಕಿ ವಶಕ್ಕೆ

ಮೇಕೆದಾಟು ಪಾದಯಾತ್ರೆ ವಿಚಾರದಲ್ಲಿ ಬರಿ ಹಿಟ್ ಆ್ಯಂಡ್ ರನ್ ಮಾಡುತ್ತಾರೆ. ಅವರು ಯಾವ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುವುದಿಲ್ಲ. ಮಹಾರಾಷ್ಟ್ರಕ್ಕೆ ಹೆದರಿಕೊಳ್ಳವ ಕಾಂಗ್ರೆಸ್‌ನಿಂದ ನಾವು ಪಾಠ ಕಲಿಯಬೇಕಿಲ್ಲ. ಡಿ. 31ಕ್ಕೆ ಕೇವಲ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಬೇಡ ಎಂದು ಹೇಳಿದರು.

Last Updated : Dec 29, 2021, 2:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.