ETV Bharat / city

ಲೆಕ್ಕ ಕೇಳುವ ಸಮಯ ಇದಲ್ಲ: ಸಂಸದ ವಿ.ಶ್ರೀನಿವಾಸ್ ಪ್ರಸಾದ್ - Coronavirus disease

ಕೊರೊನಾ ಹೆಸರಲ್ಲಿ ಸಾವಿರಾರು ಕೋಟಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೆಕ್ಕ ಕೊಡಿ ಎಂದು ಕೇಳುತ್ತಿರುವುದು ಸರಿಯಲ್ಲ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದರು.

MP V Srinivas Prasad
ಸಂಸದ ವಿ.ಶ್ರೀನಿವಾಸ್ ಪ್ರಸಾದ್
author img

By

Published : Jul 23, 2020, 4:24 PM IST

ಮೈಸೂರು: ಭೀಕರ ಸಾಂಕ್ರಾಮಿಕ ರೋಗಕ್ಕೆ ಇಡೀ ಪ್ರಪಂಚವೇ ತಲ್ಲಣಗೊಂಡಿದೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಲೆಕ್ಕ ಕೇಳುತ್ತಿರುವುದು ಸರಿಯಲ್ಲ. ಅದಕ್ಕೆ ಸಮಯ ಇದಲ್ಲ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದರು.

ಇಂದು ತಮ್ಮ ಸ್ವಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹೆಸರಲ್ಲಿ ಸಾವಿರಾರು ಕೋಟಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೆಕ್ಕ ಕೊಡಿ ಎಂದು ಕೇಳುತ್ತಿರುವುದು ಸರಿಯಲ್ಲ. ಲೆಕ್ಕ ಕೊಡಿ ಎಂದು ಕೇಳುವುದು ತಪ್ಪಲ್ಲ. ಆದರೆ ಅದಕ್ಕೆ ಇದು ಸರಿಯಾದ ಸಮಯ ಅಲ್ಲ ಎಂದರು.

ಸಂಸದ ವಿ.ಶ್ರೀನಿವಾಸ್ ಪ್ರಸಾದ್

ಇಡೀ ಪ್ರಪಂಚವೇ ಭೀಕರ ಸಾಂಕ್ರಾಮಿಕ ರೋಗದಿಂದ ತಲ್ಲಣಗೊಂಡಿದ್ದು, ಈ ಸಮಯದಲ್ಲಿ ಲೆಕ್ಕ ಇಡಲು ಸಾಧ್ಯವೇ? ಲೆಕ್ಕ ಕೇಳುವುದನ್ನು ಬಿಟ್ಟು ಸರ್ಕಾರದ ಜೊತೆ ಸಹಕಾರ ನೀಡಬೇಕು. ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದರೆ ಅಲ್ಲಿ ಲೆಕ್ಕ ಸಿಗುತ್ತದೆ. ಲೆಕ್ಕ ಕೊಡದೆ ಯಾರು ಎಲ್ಲಿಯೂ ಓಡಿ ಹೋಗುವುದಿಲ್ಲ ಎಂದರು.

ಈ‌ ಸಂದರ್ಭದಲ್ಲಿ ದೇವೇಗೌಡರು, ಕುಮಾರಸ್ವಾಮಿ ಎಲ್ಲರೂ ಹೇಳಿದ್ದಾರೆ. ಇವತ್ತಿನ ಪರಿಸ್ಥಿತಿಯಲ್ಲಿ ಲೆಕ್ಕ ಕೇಳುವುದು ತಪ್ಪು. ಪ್ರತಿಪಕ್ಷದ ನಾಯಕರು ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.