ಮೈಸೂರು : ಕೊರೊನಾ ನಿಯಂತ್ರಣಕ್ಕಾಗಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಿರುವ ಹಿನ್ನೆಲೆ ಸಾಂಸ್ಕೃತಿಕ ನಗರಿಯಲ್ಲಿ ಅಂದು ಏನು ಇರುತ್ತದೆ ಹಾಗೂ ಯಾವುದು ಲಭ್ಯವಿರುವುದಿಲ್ಲ ಎಂಬುವುದರ ಕುರಿತು ನಗರ ಪೊಲೀಸ್ ಕಮಿಷನರ್ ಡಾ. ಚಂದ್ರಗುಪ್ತ ಅವರ ವಿವರಿಸಿದ್ದಾರೆ.
ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ವೀಕೆಂಡ್ ಕರ್ಫ್ಯೂವನ್ನು ಜಾರಿ ಮಾಡಲು ಸರ್ಕಾರ ತೀರ್ಮಾನಿಸಿದೆ. ಅಂದಿನ ದಿನ ಜನರು ಅನಾವಶ್ಯಕವಾಗಿ ಓಡಾಡುವಂತಿಲ್ಲ.
ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ. ತುರ್ತು ವಿಭಾಗ ಮತ್ತು ಕೋವಿಡ್ ಕೆಲಸದಲ್ಲಿರುವ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಚೇರಿಗಳು ತೆರೆದಿರುತ್ತವೆ.
24 ಗಂಟೆ ಕೆಲಸ ಮಾಡುವ ಕಾರ್ಖಾನೆಗಳಿಗೆ, ಟೆಲಿಕಾಂ ಮತ್ತು ಇಂಟರ್ನೆಟ್ ಸೇವೆ, ಆಸ್ಪತ್ರೆಗಳು ವೀಕೆಂಡ್ ಕರ್ಫ್ಯೂನಿಂದ ವಿನಾಯಿತಿ ನೀಡಲಾಗಿದೆ.
ವೀಕೆಂಡ್ ಕರ್ಫ್ಯೂನಲ್ಲಿ ಅಗತ್ಯ ವಸ್ತುಗಳು, ತರಕಾರಿ, ಹಣ್ಣು, ಹಾಲುಗಳನ್ನು ಕೊಳ್ಳಲು ಬೆಳಗ್ಗೆ 6 ರಿಂದ 10 ಗಂಟೆವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ನಂತರ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲು ಸೂಚನೆ ನೀಡಲಾಗಿದೆ.
ಹೋಟೆಲ್ ಮತ್ತು ಬಾರ್ ಅಂಡ್ ರೆಸ್ಟೊರೆಂಟ್‌ಗಳಲ್ಲಿ ಪಾರ್ಸಲ್‌ಗಳಿಗೆ ಅವಕಾಶವಿದೆ. ಶಾಪಿಂಗ್ ಮಾಲ್, ಜಿಮ್ ಹಾಗೂ ಧಾರ್ಮಿಕ ಕ್ಷೇತ್ರಗಳು ಬಂದ್ ಆಗಲಿವೆ. ದೂರದ ಸಾರಿಗೆ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಮದುವೆಗೆ ಕಾರ್ಯಗಳಿಗೆ 50 ಜನರಿಗೆ ಮಾತ್ರ ಅವಕಾಶ ಎಂದು ವೀಕೆಂಡ್‌ನ ಕರ್ಫ್ಯೂ ಬಗ್ಗೆ ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ವಿವರಿಸಿದರು.