ETV Bharat / city

ಮೈಸೂರು ರವಿ ಕೊಲೆ ಪ್ರಕರಣ : ವ್ಯಾವಹಾರಿಕ ದ್ವೇಷವೇ ಕೊಲೆಗೆ ಕಾರಣವಾಯ್ತಾ?

ಕಳೆದ ಆರು ತಿಂಗಳ ಹಿಂದೆ ರವಿ ಮನೆಯ ಮುಂದೆ ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ಮಾಡಿದ್ದರು. ಕಳೆದ ಸಂಜೆ ರವಿ ಕಚೇರಿಯಲ್ಲಿ ಒಬ್ಬರೇ ಇರುವುದನ್ನು ಖಚಿತಪಡಿಸಿಕೊಂಡ ದುಷ್ಕರ್ಮಿಗಳು ಹೊಂಚು ಹಾಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಹಲ್ಲೆ ಮಾಡುವ ಮೊದಲು ಕಚೇರಿಯಲ್ಲಿದ್ದ ಸಿ ಸಿ ಕ್ಯಾಮೆರಾಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ..

Mysore murder case police investigation
ವ್ಯಾವಹಾರಿಕ ದ್ವೇಷವೇ ಕೊಲೆಗೆ ಕಾರಣವಾಯ್ತಾ?
author img

By

Published : May 4, 2022, 4:49 PM IST

ಮೈಸೂರು : ಮಂಗಳವಾರ ಸಂಜೆ ಎಪಿಎಂಸಿ ಮಾರುಕಟ್ಟೆಯಲ್ಲಿ ಭೀಕರವಾಗಿ ಕೊಲೆಯಾದ ರವಿಯ ಕೊಲೆಗೆ ವ್ಯಾವಹಾರಿಕ ದ್ವೇಷವೇ ಕಾರಣ ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಮಧ್ಯಮ ವರ್ಗದ ಜೀವನ ನಡೆಸುತ್ತಿದ್ದ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ರವಿ ಹಲವು ವರ್ಷಗಳ ಹಿಂದೆ ಜೀವನೋಪಾಯಕ್ಕಾಗಿ ನಗರದಲ್ಲಿನ ಬಂಡಿಪಾಳ್ಯ ಎಪಿಎಂಸಿ ಮಾರುಕಟ್ಟೆಯಲ್ಲಿ ಕೂಲಿ ಕೆಲಸಕ್ಕೆ ಸೇರಿದ್ದರು.

ಮದುವೆಯಾದ ನಂತರ ಮೈಸೂರಿನ ಉತ್ತನಹಳ್ಳಿಯಲ್ಲಿ ಹೆಂಡತಿ ಹಾಗೂ ಮೂವರು ಮಕ್ಕಳ ಜೊತೆ ವಾಸವಾಗಿದ್ದರು. ಹಲವು ವರ್ಷಗಳ ಅನುಭವದ ಬಳಿಕ ವ್ಯಾಪಾರ, ವ್ಯವಹಾರಗಳ ಮಜಲುಗಳನ್ನು ಅರಿತ ರವಿ ಹಂತ ಹಂತವಾಗಿ ಬೆಳೆದು ಅದೇ ಮಾರುಕಟ್ಟೆಯಲ್ಲಿ ದಲ್ಲಾಳಿಯಾದರು. ದಲ್ಲಾಳಿಯಾದ ಬಳಿಕ ಆರ್ಥಿಕವಾಗಿ ಸದೃಢರಾಗಿದ್ದರು. ಆದರೂ ಕೂಡ ಯಾವುದೇ ಹಮ್ಮುಬಿಮ್ಮು ಇಲ್ಲದೇ ಮಾರುಕಟ್ಟೆಯಲ್ಲಿ ಎಲ್ಲರೊಟ್ಟಿಗೂ ಸ್ನೇಹಪೂರ್ವಕವಾಗಿಯೇ ಇದ್ದರು.

ಹೀಗಿದ್ದ ರವಿಯ ಏಳಿಗೆಯನ್ನು ಸಹಿಸಲಾರದ ಕೆಲ ದುಷ್ಕರ್ಮಿಗಳು ಮಂಗಳವಾರ ಸಂಜೆ ಎಪಿಎಂಸಿ ಮಾರುಕಟ್ಟೆಯಲ್ಲಿರುವ ರವಿ ಅವರ ಕಚೇರಿಯೊಳಗೆ ನುಗ್ಗಿ ಏಕಾಏಕಿ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಈ ಕೊಲೆಗೆ ವ್ಯವಹಾರಿಕ ದ್ವೇಷವೇ ಕಾರಣ ಎಂದು ಹೇಳಲಾಗುತ್ತಿದೆ. ಅದಷ್ಟೇ ಅಲ್ಲ, ಹಣಕಾಸಿನ ವ್ಯವಹಾರದಲ್ಲೂ ಕೂಡ ರವಿ ಹೆಸರು ತಳುಕು ಹಾಕಿಕೊಂಡಿದೆ.

ಕಳೆದ ಆರು ತಿಂಗಳ ಹಿಂದೆ ರವಿ ಮನೆಯ ಮುಂದೆ ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ಮಾಡಿದ್ದರು. ಕಳೆದ ಸಂಜೆ ರವಿ ಕಚೇರಿಯಲ್ಲಿ ಒಬ್ಬರೇ ಇರುವುದನ್ನು ಖಚಿತಪಡಿಸಿಕೊಂಡ ದುಷ್ಕರ್ಮಿಗಳು ಹೊಂಚು ಹಾಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಹಲ್ಲೆ ಮಾಡುವ ಮೊದಲು ಕಚೇರಿಯಲ್ಲಿದ್ದ ಸಿ ಸಿ ಕ್ಯಾಮೆರಾಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ.

ಹಲ್ಲೆಗೊಳಗಾದ ರವಿ ಕಿರುಚಾಡುವ ಸದ್ದನ್ನು ಕೇಳಿ ಕೆಲಸಗಾರರು ಹಾಗೂ ಅಕ್ಕಪಕ್ಕದ ಮಳಿಗೆಯವರು ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಹಲ್ಲೆ ಮಾಡಿರುವ ಕಿರಾತಕರು ಸಹಾಯಕ್ಕೆ ಬಂದ ಜನರಿಗೂ ಕೂಡ ಕೊಲೆ ಬೆದರಿಕೆ ಒಡ್ಡಿ ಹೆದರಿಸಿ ಪರಾರಿಯಾಗಿದ್ದಾರೆ. ಘಟನೆಯ ಬಳಿಕ ಎಸ್​ಪಿಆರ್ ಚೇತನ್, ಎಎಸ್​ಪಿ ಶಿವಕುಮಾರ್ ಆರ್ ದಂಡಿನ ಮತ್ತು ದಕ್ಷಿಣ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಶಶಿಕುಮಾರ್ ಹಾಗೂ ಶ್ವಾನದಳದ ಸಿಬ್ಬಂದಿ ಮತ್ತು ಬೆರಳಚ್ಚು ತಜ್ಞರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಮಾಹಿತಿ ಕಲೆ ಹಾಕಿದ್ದಾರೆ.

ನಂತರ ಮೃತ ದೇಹವನ್ನು ಮೈಸೂರು ಮೆಡಿಕಲ್ ಕಾಲೇಜಿನ ಶವಾಗಾರಕ್ಕೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ವಾರಸುದಾರರಿಗೆ ಒಪ್ಪಿಸಲಾಗುತ್ತದೆ. ರವಿಯ ಚಲನ ವಲನಗಳ ಬಗ್ಗೆ ತಿಳಿದಿರುವವರೆ ಈ ಕೊಲೆ ಮಾಡಿದ್ದಾರೆ ಎಂಬುದು ಸ್ಥಳೀಯರ ಮಾತು. ಯಾವ ಕಾರಣಕ್ಕೆ ಕೊಲೆ ಮಾಡಿದ್ದಾರೆ ಎಂಬುದು ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ.

ಇದನ್ನೂ ಓದಿ: ಮೈಸೂರು: ಕರ್ತವ್ಯದಲ್ಲಿದ್ದಾಗಲೇ ಎಪಿಎಂಸಿ ಏಜೆಂಟ್‌ ರವಿ ಬರ್ಬರ ಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.