ಮೈಸೂರು : ದಿ.ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡುವುದಾಗಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಘೋಷಿಸಿದರು.
ಮೈಸೂರು ವಿವಿ ಕ್ರಾಫರ್ಡ್ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬಕ್ಕೆ ಮೈಸೂರು ವಿವಿಯಿಂದ ಉಡುಗೊರೆಯಾಗಿ ಮರಣೋತ್ತರ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದು ಹೇಳಿದರು.
ಪುನೀತ್ ರಾಜ್ ಕುಮಾರ್ ಪರವಾಗಿ ಗೌರವ ಡಾಕ್ಟರೇಟ್ ಪಡೆಯಲು ಅವರ ಪತ್ನಿ ಅಶ್ವಿನಿ ಸಮ್ಮತಿಸಿದ್ದಾರೆ. ಮಾ. 22ರಂದು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ನಡೆಯುವ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಡಾ.ರಾಜ್ ಕುಮಾರ್ ಅವರಿಗೂ ಮೈಸೂರು ವಿವಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಇದನ್ನೂ ಓದಿ: ನಟ ಪುನೀತ್ ರಾಜ್ಕುಮಾರ್ಗೆ ಶೀಘ್ರದಲ್ಲೇ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು : ಸಿಎಂ ಬಸವರಾಜ ಬೊಮ್ಮಾಯಿ