ಮೈಸೂರು: ವಿಶ್ವವಿದ್ಯಾಲಯದ 2021-22ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಾತಿ ಸಂಬಂಧ ಈಗಾಗಲೇ ಆನ್ಲೈನ್ ಪೋರ್ಟಲ್ ಮೂಲಕ ರಿಜಿಸ್ಟಾರ್ ಆದ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದ ವಿದ್ಯಾರ್ಥಿಗಳು 2021ರ ಡಿಸೆಂಬರ್ 6 ರಿಂದ ಆನ್ಲೈನ್ನಲ್ಲಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ವೆಬ್ಸೈಟ್ www.uni-mysore.ac.in ನಿಂದ ಪೂರ್ಣ ವಿವರಗಳನ್ನು ಗಮನಿಸಿ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಹೆಲ್ಪ್ ಡೆಸ್ಕ್ ಮೂಲಕ ಅಥವಾ ದೂರವಾಣಿ ಸಂಖ್ಯೆ: 0821-2419605, 2419609 ಹಾಗೂ 2419611 ಅನ್ನು ಸಂಪರ್ಕಿಸಬಹುದು ಎಂದು ಮೈಸೂರು ವಿಶ್ವವಿದ್ಯಾಲಯದ ಉಪ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಇದನ್ನೂ ಓದಿ: ಕೋವಿಡ್ ಭೀತಿ : ಶ್ರೀ ಸಿದ್ಧಾರೂಢ ಸ್ವಾಮಿ ಮಠದ ಲಕ್ಷದೀಪೋತ್ಸವ ರದ್ದು)