ETV Bharat / city

Mysuru Gang Rape: ಬಂಧಿತ ಆರೋಪಿಗಳು 10 ದಿನ ​ಪೊಲೀಸ್ ಕಸ್ಟಡಿಗೆ - mysore rape case

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಶನಿವಾರ ರಾತ್ರಿ ಮೂರನೇ ಜೆಎಂಎಫ್‌ಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ಆರೋಪಿಗಳನ್ನು 10 ದಿನ ​ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಅತ್ಯಾಚಾರಿ ಆರೋಪಿಗಳ  ​10ದಿವಸ ಪೊಲೀಸ್ ಕಸ್ಟಡಿಗೆ

author img

By

Published : Aug 29, 2021, 8:21 AM IST

ಮೈಸೂರು: ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಂಧಿತ ಆರೋಪಿಗಳನ್ನು ಮೂರನೇ ಜೆಎಂಎಫ್‌ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಚಾಮುಂಡಿ ಬೆಟ್ಟದ ಲಲಿತಾದ್ರಿಪುರಂನ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳನ್ನು ನಿನ್ನೆ ತಮಿಳುನಾಡಿನಲ್ಲಿ ಬಂಧಿಸಿ ರಾಜ್ಯಕ್ಕೆ ಕರೆ ತರಲಾಗಿತ್ತು. ಬಳಿಕ ನಿನ್ನೆ ರಾತ್ರಿ ನಗರದ ಮೂರನೇ ಜೆಎಂಎಫ್‌ಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು.

ಹೆಚ್ಚಿನ ಓದಿಗೆ: Mysuru Gang Rape: ಮುಂಬೈಗೆ ತೆರಳಿದ ಸಂತ್ರಸ್ತೆಗೆ ಆರೋಪಿಗಳ ಫೋಟೋ ಕಳಿಸಿ ಖಚಿತಪಡಿಸಿಕೊಂಡ ಪೊಲೀಸರು!

ಸದ್ಯ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿರುವ ಪೊಲೀಸರು, ಅಜ್ಞಾತ ಸ್ಥಳದಲ್ಲಿಟ್ಟು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಕಾರಣ ಹಾಗೂ ಪಾತ್ರಗಳ ಕುರಿತು ಮಾಹಿತಿ ಸಂಗ್ರಹಿಸಲಿದ್ದಾರೆ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.