ಮೈಸೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಪರೀಕ್ಷೆಗೆ ಭಯಪಟ್ಟು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಚ್.ಡಿ.ಕೋಟೆಯಲ್ಲಿ ನಡೆದಿದೆ. ತಾಲೂಕಿನ ಹನುಮಂತ ನಗರದ ರಾಮು ಅವರ ಪುತ್ರಿ ಅನು(18) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನಗರದ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದರು. ಓದಿನಲ್ಲೂ ಸಹ ಇವರು ಮುಂದಿದ್ದರು ಎನ್ನಲಾಗಿದೆ. ಎಂದಿನಂತೆ ಗುರುವಾರ ಬೆಳಿಗ್ಗೆ ತಂದೆ, ಪರೀಕ್ಷೆ ಇದೆ ಓದಿಕೊಳ್ಳಬೇಕು ಎಂದು ಹೇಳಿ ರೂಂಗೆ ತೆರಳಿದ್ದಾರೆ. ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.
ಈ ವಿಷಯ ತಿಳಿದು ತಂದೆ ತಾಯಿ ಆಕೆಯನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ಅಷ್ಟರಲ್ಲಾಗಲೇ ಆಕೆ ಸಾವನ್ನಪ್ಪಿದ್ದು, ಈ ವಿಚಾರ ತಿಳಿದು ವಿದ್ಯಾರ್ಥಿಗಳು, ಸ್ಥಳೀಯರು ದುಃಖ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಹೈಕಮಾಂಡ್ ಅಂಗಳಕ್ಕೆ ಬೆಳಗಾವಿ ಬಿಜೆಪಿ ನಾಯಕರ ಭಿನ್ನಮತ: ಜೆ.ಪಿ.ನಡ್ಡಾ ಕೈ ಸೇರಿದ ವರದಿ