ಮೈಸೂರು: ಎನ್ಡಿಎ ನೇತೃತ್ವದ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ್ ಆರೋಪಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಪಕ್ಷವನ್ನು ಬೆಂಬಲಿಸುವ ಸಂಘ ಪರಿವಾರ ನಮ್ಮ ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ತೆಗೆದುಕೊಂಡು ಹೋಗುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರ ಏನೆಂಬುದು ದೇಶಕ್ಕೆ ಗೊತ್ತಿದೆ ಎಂದು ಕಿಡಿಕಾರಿದರು.
ಈ ಬಾರಿ ಚುನಾವಣೆಯಲ್ಲಿ ಯಾವುದೇ ಸರ್ಕಾರ ಬಂದರೂ ನಮ್ಮ ದೇಶದ ಸಮಸ್ಯೆಗೆ ಪರಿಹಾರ ಇಲ್ಲ. ನಮ್ಮ ದೇಶದ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಅವಶ್ಯಕತೆ ಇದೆ. ಜಯಪ್ರಕಾಶ್ ನಾರಾಯಣ್ ಅವರು ಸ್ಥಾಪಿಸಿದ್ದ ಸಿಟಿಜನ್ ಫಾರ್ ಡೆಮಾಕ್ರಸಿ ಸಂಸ್ಥೆಯಿಂದ ಭ್ರಷ್ಟಾಚಾರಿಗಳ ವಿರುದ್ದದ ಹೋರಾಟಕ್ಕೆ ಸಿದ್ಧರಿದ್ದೇವೆ. ದೇಶದ ಸಮಸ್ಯೆಗಳ ಬಗ್ಗೆ ವಿಚಾರ ಸಂಕೀರ್ಣಗಳನ್ನು ಕೂಡ ಆಯೋಜಿಸಲಾಗುತ್ತಿದೆ ಎಂದು ಹಿರೇಮಠ ತಿಳಿಸಿದರು.