ಮೈಸೂರು: ನಗರ ಪಾಲಿಕೆ ಆಯುಕ್ತೆ ಶಿಲ್ಪನಾಗ್ ಹಾಗೂ ಡಿಸಿಪಿ ಗೀತಾ ಪ್ರಸನ್ನ, ದೇವರಾಜ ಮಾರುಕಟ್ಟೆ ಹಾಗು ಸುತ್ತಮುತ್ತಲ ವಾಣಿಜ್ಯ ಪ್ರದೇಶಗಳಿಗೆ ಭೇಟಿ ನೀಡಿ, ವ್ಯಾಪಾರಿಗಳಿಗೆ ಕೊರೊನಾ ಬಗ್ಗೆ ಅರಿವು ಮೂಡಿಸಿದರು. ಹಾಗೆಯೇ, ನಿನ್ನೆ ರಾತ್ರಿಯಿಂದ ನೈಟ್ ಕರ್ಫ್ಯೂ ಜಾರಿಯಾದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ನಗರದ ಪ್ರಮುಖ ಬೀದಿಗಳಲ್ಲಿ ಪರಿಶೀಲನೆ ನಡೆಸಿದರು.
ದಿನೇದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದರಿಂದ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಮಾಸ್ಕ್ ಇಲ್ಲದೆ ಸಾರ್ವಜನಿಕ ಸ್ಥಳಗಳಿಗೆ ಬರಬಾರದು. ಕೊರೊನಾ ಹಾವಳಿ ತಪ್ಪಿಸಲು ಎಲ್ಲರೂ ಕೈ ಜೋಡಿಸಿ ಎಂದು ಮನವಿ ಮಾಡಿದರು.
ಕೆಲ ಅಂಗಡಿ ಮಾಲೀಕರು ರಾತ್ರಿ 9 ಗಂಟೆಯಾದರೂ ಅಂಗಡಿ ಮುಚ್ಚದಿರುವುದನ್ನು ಗಮನಿಸಿದ ಪೊಲೀಸರು, ಬಲವಂತವಾಗಿ ಮುಚ್ಚಿಸಿದರು.
ಇದನ್ನೂ ಓದಿ: ಒಂದೇ ವಾರದಲ್ಲಿ ಕೋವಿಡ್ಗೆ ಬಲಿಯಾದ ಬಾಗಲಕೋಟೆಯ ದಂಪತಿ