ETV Bharat / city

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ: ಮಾಜಿ ಸಿಎಂ ಬಿಎಸ್​ವೈ ಸ್ಪಷ್ಟನೆ

author img

By

Published : Mar 30, 2022, 11:06 AM IST

Updated : Mar 30, 2022, 11:37 AM IST

ಪರಿಶಿಷ್ಟ ಪಂಗಡ, ಪರಿಶಿಷ್ಟ ವರ್ಗ ಹಾಗೂ ಅಲ್ಪ ಸಂಖ್ಯಾತರನ್ನ ನಮ್ಮ ಜೊತೆ ತೆಗೆದುಕೊಂಡು ಹೋಗುತ್ತೇವೆ‌. ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ನೂರಕ್ಕೆ ನೂರರಷ್ಟು ಮತ್ತೊಮ್ಮೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

no cm changes in karnataka: ex cm bs yediyurappa
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ: ಮಾಜಿ ಸಿಎಂ ಬಿಎಸ್ ಸ್ಪಷ್ಟನೆ

ಮೈಸೂರು: ಮುಂದಿನ ಚುನಾವಣೆ ಬಸವರಾಜ ಬೊಮ್ಮಯಿ ನೇತೃತ್ವದಲ್ಲೇ ನಡೆಯುತ್ತದೆ. ಮುಖ್ಯಮಂತ್ರಿ ಬದಲಾವಣೆ ಇಲ್ಲ, ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮೈಸೂರಿನ ಸುತ್ತೂರು ಮಠದಲ್ಲಿ ಸ್ಪಷ್ಟನೆ ನೀಡಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ: ಮಾಜಿ ಸಿಎಂ ಬಿಎಸ್​ವೈ ಸ್ಪಷ್ಟನೆ

ಮಠಕ್ಕೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಮಠದ ವತಿಯಿಂದ ಪೂರ್ಣಕುಂಭ ಸ್ವಾಗತ ನೀಡಲಾಯಿತು. ನಂತರ ಶ್ರೀಗಳ‌ ಆರ್ಶಿವಾದ ಪಡೆದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್‌ವೈ, ಅವಧಿಗೆ ಮುನ್ನ ವಿಧಾನಸಭಾ ಚುನಾವಣೆ ಬರುವ ವಾತಾವರಣ ಕಾಣುತ್ತಿಲ್ಲ. ಏಪ್ರಿಲ್ 1 ರಂದು ಅಮಿತ್ ಶಾ ರಾಜ್ಯಕ್ಕೆ ಬರುತ್ತಾರೆ. ಆಗ ಈ ವಿಚಾರದ ಬಗ್ಗೆ ತಿಳಿಸುತ್ತೇವೆ ಎಂದರು.

100ಕ್ಕೆ 100ರಷ್ಟು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪರಿಶಿಷ್ಟ ವರ್ಗ ಹಾಗೂ ಅಲ್ಪ ಸಂಖ್ಯಾತರನ್ನ ನಮ್ಮ ಜೊತೆ ತೆಗೆದುಕೊಂಡು ಹೋಗುತ್ತೇವೆ‌. ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ನೂರಕ್ಕೆ ನೂರರಷ್ಟು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದರು.

ರಾಜ್ಯದಲ್ಲಿ ಬಿಜೆಪಿ ಅಲೆ ಇದೆ: ಕಾಂಗ್ರೆಸ್ ಏನೇ ಹೇಳಿದರೂ ಮುಂದಿನ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನ ಪಡೆದು ಅಧಿಕಾರಕ್ಕೆ ಬರುವುದು ನೂರಕ್ಕೆ ನೂರರಷ್ಟು ಸತ್ಯ. ಇಂದು ಅಧಿವೇಶನದ ಕೊನೆಯ ದಿನ. ನಾವು ಕೊಟ್ಟ ಭರವಸೆಗಳನ್ನ ಸಿಎಂ ಬಸವರಾಜ ಬೊಮ್ಮಾಯಿ ಈಡೇರಿಸಲಿದ್ದಾರೆ. ಏಪ್ರಿಲ್ 1ರ ನಂತರ ಮೂರ್ನಾಲ್ಕು ತಂಡಗಳಾಗಿ ರಾಜ್ಯದ ಪ್ರವಾಸ ಮಾಡುತ್ತೇವೆ. ರಾಜ್ಯದಲ್ಲಿ ಬಿಜೆಪಿಗೆ ಅನುಕೂಲಕರವಾದ ವಾತಾವರಣವಿದ್ದು, ನಾವು ಮಾಡಿರುವ ಕೆಲಸಗಳನ್ನ ಮನೆ ಮನೆಗೆ ತಲುಪಿಸುವ ಕೆಲಸ ಮಾಡಲಾಗುವುದು ಎಂದರು.

ಇನ್ನು ತಮ್ಮ ಮಗ ವಿಜಯೇಂದ್ರ ಸಂಪುಟ ಸೇರ್ಪಡೆ ವಿಚಾರದ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ ಎಂದ ಬಿಎಸ್ ಯಡಿಯೂರಪ್ಪ, ಹಲಾಲ್ ವಿಚಾರದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಇದನ್ನೂ ಓದಿ: ಕುಟುಂಬ ಸಮೇತ ಚಿತ್ರಸಂತೆಗೆ ಭೇಟಿ ನೀಡಿದ ಬಿ.ಎಸ್​.ಯಡಿಯೂರಪ್ಪ

Last Updated : Mar 30, 2022, 11:37 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.