ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದು ಜೂ.20ರಂದು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. ಅಂದು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9ರವರೆಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ.
ಷರತ್ತುಗಳು ಹೀಗಿವೆ:
- ನಿಷೇಧಿತ ಅವಧಿಯಲ್ಲಿ ಮೆಟ್ಟಿಲು ಮಾರ್ಗದಿಂದ ಚಾಮುಂಡಿ ಬೆಟ್ಟಕ್ಕೆ ಭಕ್ತರು ಮತ್ತು ಸಾರ್ವಜನಿಕರು ಬರುವುದು ನಿಷೇಧ.
- ಈ ಮೇಲ್ಕಂಡ ಪ್ರವೇಶ ನಿಷೇಧಿತ ಅವಧಿಯಲ್ಲಿ ತುರ್ತು ಸೇವಾ ವಾಹನಗಳನ್ನು ಹೊರತುಪಡಿಸಿ ಇತರೆ ಸಾರ್ವಜನಿಕ ಹಾಗೂ ಖಾಸಗಿ ವಾಹನಗಳ ಪ್ರವೇಶ ನಿರ್ಬಂಧ.
- ಚಾಮುಂಡಿ ಬೆಟ್ಟದ ಗ್ರಾಮಸ್ಥರು ನಿಷೇಧಿತ ಅವಧಿಯಲ್ಲಿ ಅನಿವಾರ್ಯ ಪ್ರಸಂಗವಿದ್ದಲ್ಲಿ ಚಾಮುಂಡಿ ಬೆಟ್ಟದ ವಾಸಸ್ಥಳದ ಗುರುತಿನ ಚೀಟಿ ಬಳಸುವುದು.
- ಕೇಂದ್ರ ಮತ್ತು ರಾಜ್ಯ ಸರ್ಕಾರ ಘೋಷಿಸಲ್ಪಟ್ಟ ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯ ವ್ಯಕ್ತಿಗಳು, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು ಮತ್ತು ತುರ್ತು ಸೇವಾ ವಾಹನಗಳನ್ನು ಹೊರತುಪಡಿಸಿ ಇತರೆ ಸಾರ್ವಜನಿಕ ವಾಹನಗಳ ಪ್ರವೇಶ ಕಡ್ಡಾಯ ನಿಷೇಧ.
ಇದನ್ನೂ ಓದಿ: ಸೋಮವಾರ ಬೆಂಗಳೂರಿಗೆ ಮೋದಿ: ಈ ಮಾರ್ಗದಲ್ಲಿರುವ ಕಾಲೇಜುಗಳಿಗೆ ರಜೆ ಘೋಷಣೆ