ಮೈಸೂರು: ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ವಿಮಾನದ ಮೂಲಕ ಔಷಧಿ ಸಿಂಪಡಣೆ ಮಾಡುತ್ತಾರೆ ಎಂಬುದು ಸುಳ್ಳು ಸುದ್ದಿ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಸ್ಪಷ್ಟಪಡಿಸಿದ್ದಾರೆ.
ವಿಮಾನದ ಮೂಲಕ ಔಷಧ ಸಿಂಪಡಣೆ ಮಾಡಲಾಗುತ್ತದೆ ಎಂಬ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಅವುಗಳನ್ನು ಯಾರೂ ನಂಬಬೇಡಿ. ಅದು ತಪ್ಪು ಮಾಹಿತಿ ಎಂದು ತಿಳಿಸಿದ್ದಾರೆ.