ETV Bharat / city

ಮೈಸೂರಿನಲ್ಲಿ ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಇಲ್ಲ: ಸಚಿವ ಎಸ್.ಟಿ.ಸೋಮಶೇಖರ್ - ಮೈಸೂರಿನಲ್ಲಿ ಜೆಡಿಎಸ್‌ ಜೊತೆ ಬಿಜೆಪಿ ಮೈತ್ರಿ ಇಲ್ಲ

ಮೈಸೂರು-ಚಾಮರಾಜನಗರ ಕ್ಷೇತ್ರದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದ್ದಾರೆ.

No tie up with JDS in Mysore: Minister ST Somashekar
ಮೈಸೂರಿನಲ್ಲಿ ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಇಲ್ಲ: ಸಚಿವ ಎಸ್.ಟಿ.ಸೋಮಶೇಖರ್
author img

By

Published : Dec 6, 2021, 1:08 PM IST

Updated : Dec 6, 2021, 7:50 PM IST

ಮೈಸೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಮೈಸೂರು-ಚಾಮರಾಜನಗರ ಕ್ಷೇತ್ರದಲ್ಲಿ ಜೆಡಿಎಸ್‌ನೊಂದಿಗೆ ಯಾವುದೇ ಹೊಂದಾಣಿಕೆ ಇಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಮೈಸೂರಿನಲ್ಲಿ ತಿಳಿಸಿದ್ದಾರೆ.

ಮೈಸೂರಿನಲ್ಲಿ ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಇಲ್ಲ: ಸಚಿವ ಎಸ್.ಟಿ.ಸೋಮಶೇಖರ್

ನಗರದಲ್ಲಿನ ಪುರಸಭೆ ಮುಂಭಾಗ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಮೈಸೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಇರುವುದರಿಂದ ಹೊಂದಾಣಿಕೆ ಪ್ರಶ್ನೆಯೇ ಬರುವುದಿಲ್ಲ. ಎಲ್ಲಿ ಜೆಡಿಎಸ್ ಅಭ್ಯರ್ಥಿ ಇಲ್ಲ. ಆ ಭಾಗದ ಪ್ರಮುಖರು ಅಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಆದರೆ ಮೈಸೂರು- ಚಾಮರಾಜನಗರ ಜಿಲ್ಲೆಗೆ ಸಂಬಂಧಪಟ್ಟಂತೆ ಯಾವುದೇ ಒಡಂಬಡಿಕೆ ಮಾಡಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ 25 ಕ್ಷೇತ್ರದಲ್ಲಿ 20 ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳು ಇದ್ದಾರೆ. ಅದರಲ್ಲಿ 15 ರಿಂದ 16 ಸೀಟ್ ಗೆಲ್ಲುತ್ತೇವೆ ಎಂದು ಹೇಳಿದರು. ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಬಳಿಕ ಪರಿಸ್ಥಿತಿ ಬದಲಾಗಿದ್ದು, ನೂರಕ್ಕೆ ನೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಮಂಜು ಗೆಲ್ಲುತ್ತಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬಿಎಸ್‌ವೈ ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ : ಮಾಜಿ ಸಿಎಂ ಹೆಚ್​​​​ಡಿಕೆ

Last Updated : Dec 6, 2021, 7:50 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.