ಮೈಸೂರು: ಅಯೋಧ್ಯೆಯಲ್ಲಿ ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕೋವಿಡ್-19ನಿಂದಾಗಿ ನೇರವಾಗಿ ಭಾಗವಹಿಸಲಾಗುತ್ತಿಲ್ಲ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ನಾಳೆ ರಾಮ ಮಂದಿರ ನಿರ್ಮಾಣದ ಶಿಲಾನ್ಯಾಸ ನಡೆಯಲಿದ್ದು, ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ದೇಶಿಕೇಂದ್ರ ಸ್ವಾಮೀಜಿಯವರನ್ನು ವಿಶ್ವ ಹಿಂದೂ ಪರಿಷತ್ತಿನ ಮುಖಂಡರು ಆಹ್ವಾನಿಸಿದ್ದರು.

ಕೋವಿಡ್ ಹಾಗೂ ಅಲ್ಲಿಯ ರಕ್ಷಣಾ ವ್ಯವಸ್ಥೆಗಳ ಕಾರಣದಿಂದಾಗಿ ಕಾರ್ಯಕ್ರಮಕ್ಕೆ ನೇರವಾಗಿ ಭಾಗವಹಿಸುತ್ತಿಲ್ಲ. ಭಕ್ತಾದಿಗಳು ಇರುವಲ್ಲಿಯೇ ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸಿ ಎಂದು ಮನವಿ ಮಾಡಿದ್ದಾರೆ.