ETV Bharat / city

6 ತಿಂಗಳ ಹಿಂದೆಯೇ ನಿಗಮ ಮಂಡಳಿ ಅಧ್ಯಕ್ಷರ ರಾಜೀನಾಮೆಗೆ ಸೂಚನೆ ನೀಡಲಾಗಿದೆ: ಸಿಎಂ ಬೊಮ್ಮಾಯಿ - CM Basavaraj Bommai statement in Mysore

ನಿಗಮ ಮಂಡಳಿ ಅಧ್ಯಕ್ಷರನ್ನು ಬದಲಾವಣೆಗೆ 6 ತಿಂಗಳ ಹಿಂದೆ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ- ಶೀಘ್ರದಲ್ಲೇ ಅಧಿಕೃತ ಆದೇಶ- ಸಿಎಂ ಬೊಮ್ಮಾಯಿ

Basavaraj Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
author img

By

Published : Jul 12, 2022, 12:37 PM IST

ಮೈಸೂರು: 6 ತಿಂಗಳ ಹಿಂದೆಯೇ ಕೋರ್ ಕಮಿಟಿ ಸಭೆಯಲ್ಲಿ ಒಂದೂವರೆ ವರ್ಷ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ಪೂರೈಸಿರುವ ಎಲ್ಲರಿಗೂ ರಾಜೀನಾಮೆ ನೀಡುವಂತೆ ಸೂಚನೆ ನೀಡಲಾಗಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಮಡಿಕೇರಿಗೆ ಮಳೆ ಹಾನಿ ಪ್ರದೇಶಗಳ ಪರಿಶೀಲನೆಗೆ ಹೊರಡುವ ಮುನ್ನ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಒಂದೂವರೆ ವರ್ಷ ಈಗಾಗಲೇ ನಿಗಮ ಮಂಡಳಿಯ ಅಧ್ಯಕ್ಷರಾಗಿ ಕೆಲಸ ಮಾಡಿರುವ ಅಧ್ಯಕ್ಷರನ್ನು ಬದಲಾವಣೆ ಮಾಡುವ ಬಗ್ಗೆ 6 ತಿಂಗಳ ಹಿಂದೆ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಮಾಡಲಾಗಿತ್ತು. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉಸ್ತುವಾರಿ ಸಚಿವರು ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ: ರಾಜ್ಯದಲ್ಲಿ ಉಸ್ತುವಾರಿ ಸಚಿವರು ಜಿಲ್ಲೆಗಳಿಗೆ ಹೋಗುತ್ತಿಲ್ಲ ಎಂಬ ಆರೋಪ ಸರಿಯಲ್ಲ. ಇಡೀ ರಾಜ್ಯ ಸರ್ಕಾರ ರಸ್ತೆಗಿಳಿದು ಕೆಲಸ ಮಾಡುತ್ತಿದೆ. ಎಲ್ಲ ಜಿಲ್ಲೆಯ ಉಸ್ತುವಾರಿ ಸಚಿವರು ತಮ್ಮ ತಮ್ಮ ಜಿಲ್ಲೆಗಳಿಗೆ ಹೋಗಿ ಕೆಲಸ ಮಾಡುತ್ತಿದ್ದಾರೆ. ನೆರೆ ಹಾನಿ ಪೀಡಿತ ಪ್ರದೇಶದಲ್ಲಿ ನಾನು ಸೇರಿದಂತೆ ಎಲ್ಲ ಸಚಿವರು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಮಳೆ ಹಾನಿ ಬಗ್ಗೆ ಮೊದಲ ಹಂತದ ನಷ್ಟದ ಬಗ್ಗೆ ಇಂದು ಸಂಜೆಯ ಒಳಗಡೆ ಅಂಕಿ-ಅಂಶಗಳನ್ನು ಬಿಡುಗಡೆ ಮಾಡುತ್ತೇವೆ. ನಂತರ ವರದಿ ಬಂದ ಮೇಲೆ ಕೇಂದ್ರಕ್ಕೆ ಪರಿಹಾರ ಕೇಳುವ ವಿಚಾರದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಸದ್ಯಕ್ಕೆ 750 ಕೋಟಿ ರೂ. ಎನ್​​ಡಿಆರ್​​ಎಫ್ ಹಣ ನಮ್ಮಲ್ಲಿದೆ. ಅನೇಕ ಕಡೆ ಭೂ ಕುಸಿತವಾಗಿದೆ. ರಸ್ತೆ, ಮನೆ, ಪ್ರಾಣ ಹಾನಿಯಾಗಿದ್ದು, ಈ ಬಗ್ಗೆ ವರದಿ ಸಿದ್ಧಪಡಿಸಿ ಸಂಜೆಯೊಳಗೆ ಪ್ರಕಟಿಸುತ್ತೇವೆ ಎಂದು ಸಿಎಂ ಮಾಹಿತಿ ನೀಡಿದರು.

ಬೆಂಗಳೂರಿನ ಚಾಮರಾಜ ಪೇಟೆ ಬಂದ್ ವಿಚಾರದ ಬಗ್ಗೆ ಪ್ರತಿಕ್ರಿಸುತ್ತ, ಅದನ್ನು ಸ್ಥಳೀಯ ಅಧಿಕಾರಿಗಳು ನೋಡಿಕೊಳ್ಳುತ್ತಾರೆ ಎಂದರು.

ಇದನ್ನೂ ಓದಿ: ಮಳೆ ಹಾನಿ: ಜನರ ಸುರಕ್ಷತೆಗೆ ನಿಗಾವಹಿಸಲು ಜಿಲ್ಲಾಡಳಿತಕ್ಕೆ ಸಚಿವ ಆಚಾರ್​ ಹಾಲಪ್ಪ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.