ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು, ಕಬಿನಿ ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ನದಿಗೆ ಬಿಡಲಾಗುವುದು.
ಆದ್ದರಿಂದ ಕಬಿನಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಕಬಿನಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ ರಾಜ್ಯದಲ್ಲಿ ಮೊದಲು ತುಂಬುವ ಜಲಾಶಯ ಕಬಿನಿಯಾಗಿದೆ. ಕಬಿನಿ ಜಲಾಶಯ ಸುತ್ತಮುತ್ತಲ ಪ್ರದೇಶಗಳಿಗೆ ಆತಂಕದ ವಾತಾವರಣ ಎದುರಾಗಲಿದೆ.
ಇದನ್ನೂ ಓದಿ : ಮಂಗಳೂರು ವಿಮಾನ ನಿಲ್ದಾಣದ ಹೊರಭಾಗದ ಅದ್ಯಪಾಡಿಯದಲ್ಲಿ ಗುಡ್ಡ ಕುಸಿತ