ಮೈಸೂರು : ಅರಮನೆ ಆವರಣದಲ್ಲಿ ನಡೆಯಲಿರುವ ಜಂಬೂಸವಾರಿ ವೀಕ್ಷಣೆಗೆ ಎರಡು ಸಾವಿರ ಮಂದಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಕಾರಣದಿಂದಾಗಿ ಸರಳ ದಸರಾ ಆಚರಿಸಲು ನಿರ್ಧರಿಸಿರುವುದರಿಂದ ಚಾಮುಂಡಿ ಬೆಟ್ಟದಲ್ಲಿ ನಡೆಯುವ ಉದ್ಘಾಟನಾ ಕಾರ್ಯಕ್ರಮಕ್ಕೆ 250, ಅರಮನೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 1 ಸಾವಿರ, ಜಂಬೂ ಸವಾರಿಗೆ 2 ಸಾವಿರ ಜನ ಸೇರಿಸಲು ಚಿಂತನೆ ನಡೆಸಿದ್ದೇವೆ.
ಜಂಬೂಸವಾರಿಗೆ ಭಾಗವಹಿಸುವ ಕಲಾವಿದರು 5 ದಿನ ಮುಚಿತವಾಗಿ ಕೊರೊನಾ ಟೆಸ್ಟ್ ಮಾಡಿಸಿಕೊಂಡು ವರದಿ ತರಬೇಕು. ನೆಗೆಟಿವ್ ಬಂದ ಕಲಾವಿದರಿಗೆ ಅವಕಾಶ ನೀಡಲಾಗುವುದು ಎಂದರು. ದಸರಾವನ್ನು ಪರಂಪರೆಯಾಗಿ ಮುಂದುವರೆಸಿಕೊಂಡು ಬರಲಾಗಿದೆ. ಹೀಗಾಗಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಬೇಕಾಗುತ್ತೆ. ಈ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಬೇಡ ಎಂದರು.