ಮೈಸೂರು : ಲಂಡನ್ ನಗರದಲ್ಲಿ ವಿಶ್ವ ಪ್ರವಾಸೋದ್ಯಮ ಮಾರುಕಟ್ಟೆ ಸಮಾವೇಶದಲ್ಲಿ ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಮಳಿಗೆಯನ್ನು ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಅಧ್ಯಕ್ಷ ಅಪ್ಪಣ್ಣ ಉದ್ಘಾಟಿಸಿದರು.
ಕೋವಿಡ್ ನಂತರ ಮೊದಲ ಬಾರಿ ನಡೆಯುತ್ತಿರುವ ವಿಶ್ವ ದರ್ಜೆಯ ಪ್ರವಾಸೋದ್ಯಮ ಸಮಾವೇಶದಲ್ಲಿ ವಿಶ್ವದ ನಾನಾ ದೇಶಗಳಿಂದ ಪ್ರವಾಸೋದ್ಯಮ ಉತ್ತೇಜಿಸಲು ಅನೇಕರು ಭಾಗವಹಿಸಿದ್ದರು.
ಈ ಸಮಾವೇಶದಲ್ಲಿ ಸೋಮವಾರ (ಅ.1) ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಮಳಿಗೆ ಉದ್ಘಾಟನೆ ಮಾಡಿದ್ದು, ಕರ್ನಾಟಕದ ಪ್ರವಾಸೋದ್ಯಮದ ಬಗ್ಗೆ ಮಾಹಿತಿ ಈ ಮಳಿಗೆಯಲ್ಲಿ ದೊರೆಯಲಿದೆ. ಈ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಗೆ ಸಹಾಯಕವಾಗಲಿದೆ.
ಈ ಸಂದರ್ಭದಲ್ಲಿ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿಜಯ್ ಶರ್ಮಾ, ನಿರ್ದೇಶಕರಾದ ಸಿಂಧು ಬಿ. ರೂಪೇಶ್ ಹಾಗೂ ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಪ್ರಧಾನ ವ್ಯವಸ್ಥಾಪಕ ಯುವರಾಜ್ ಅವರು ಭಾಗವಹಿಸಿದ್ದರು.