ಮೈಸೂರು: ಅಣ್ಣನ ಮೊಮ್ಮಗನ ಮದುವೆಯಲ್ಲಿ ಭಾಗವಹಿಸಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಮ್ಮ ಸಿದ್ದರಾಮಯ್ಯನವರ ಅಪರೂಪದ ಫೋಟೋ ಹಾಗೂ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಿನ್ನೆ ಸಿದ್ದರಾಮನ ಹುಂಡಿಯಲ್ಲಿ ನಡೆದ ಶಿವಸ್ವಾಮಿಯವರ ಮಗನ ಮದುವೆಗೆ ಪತ್ನಿ ಜೊತೆ ಪ್ರತಿಪಕ್ಷ ನಾಯಕ ಆಗಮಿಸಿ, ನವ ಜೋಡಿಗೆ ಅಕ್ಷತೆ ಹಾಕಿ ಆಶೀರ್ವದಿಸಿದರು. ಸಿದ್ದರಾಮಯ್ಯನವರು ತಮ್ಮ ಪತ್ನಿಯೊಂದಿಗೆ ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಇದನ್ನೂ ಓದಿ: 'ನಿಮ್ಮನ್ನು ಸಿಎಂ ಮಾಡ್ತೀವಿ, 2,500 ಕೋಟಿ ರೆಡಿ ಮಾಡಿಡಿ ಅಂದಿದ್ರು': ಯತ್ನಾಳ್