ಮೈಸೂರು: ಜಿಲ್ಲೆಯ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ ಓರ್ವ ಕೊರೊನಾ ಸೋಂಕಿತ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
![P-2824 Complete Cure and discharge in Mysore](https://etvbharatimages.akamaized.net/etvbharat/prod-images/kn-mys-03-discharge-vis-ka10003_04062020213709_0406f_1591286829_913.jpg)
ರೋಗಿ ಸಂಖ್ಯೆ-2,824 ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖನಾಗಿ ಗುರುವಾರ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ.
ಒಟ್ಟಾರೆ 10,367ಮಂದಿಯನ್ನು ಪರೀಕ್ಷಿಸಲಾಗಿದ್ದು, ಇದರಲ್ಲಿ 10,268 ಮಂದಿಯ ವರದಿ ನೆಗೆಟಿವ್ ಎಂದು ಬಂದಿದೆ. ಒಟ್ಟು 99 ಕೊರೊನಾ ಪ್ರಕರಣಗಳ ಪೈಕಿ 6 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ.
777 ಮಂದಿ ಹೋಮ್ ಕ್ವಾರೆಂಟೈನ್ ಮಾಡಲಾಗಿದ್ದು, 140 ಮಂದಿ ಫೆಸಿಲಿಟಿ ಕ್ವಾರೆಂಟೈನ್‌ನಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.