ETV Bharat / city

2 ವರ್ಷದ ನಂತರ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ.. ಯುಗಾದಿ ಸಂಭ್ರಮದಲ್ಲಿ ಭಕ್ತರು - ತಿ.ನರಸೀಪುರ ತಾಲೂಕಿನ ತ್ರಿವೇಣಿ ಸಂಗಮ

ಎರಡು ವರ್ಷಗಳ ನಂತರ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಕ್ಕೆ ಅವಕಾಶ ನೀಡಲಾಗಿದ್ದು, ಭಕ್ತ ಸಾಗರವೇ ಹರಿದುಬಂದಿದೆ.

people take holy dip in triveni sangam
ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ ಪುಣ್ಯಸ್ನಾನ
author img

By

Published : Apr 2, 2022, 9:03 AM IST

ಮೈಸೂರು: ಕಳೆದ ಎರಡು ವರ್ಷಗಳಿಂದ ಕೋವಿಡ್​ನಿಂದಾಗಿ ಮಂಕಾಗಿದ್ದ ಹಬ್ಬದಾಚರಣೆಗಳು ಈ ಬಾರಿ ಕೊರೊನಾ ಸೋಂಕಿನ ಸಂಖ್ಯೆ ಇಳಿಮುಖವಾಗಿದ್ದಕ್ಕೆ ರಾಜ್ಯದಲ್ಲಿ ಯುಗಾದಿ ಸಂಭ್ರಮ ಕಳೆಗಟ್ಟಿದೆ. ಎರಡು ವರ್ಷಗಳ ನಂತರ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತ ಸಾಗರ ಹರಿದುಬಂದಿದೆ. ತಿ.ನರಸೀಪುರ ತಾಲೂಕಿನ ತ್ರಿವೇಣಿ ಸಂಗಮದಲ್ಲಿ‌ ಮಿಂದೇಳುವ ಭಕ್ತಾದಿಗಳು, ಗಂಗಾಮಾತೆಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಗುಂಜನರಸಿಂಹ ದೇವರ ದರ್ಶನ ಪಡೆಯುತ್ತಿದ್ದಾರೆ.

ತ್ರಿವೇಣಿ ಸಂಗಮದಲ್ಲಿ ಮಿಂದೇಳುತ್ತಿರುವ ಭಕ್ತರು..

ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಸ್ಥಗಿತಗೊಂಡಿದ್ದ ಪುಣ್ಯಸ್ನಾನಕ್ಕೆ ಈ ವರ್ಷ ಅವಕಾಶ ನೀಡಲಾಗಿದೆ. ವಿವಿಧ ಗ್ರಾಮದ ದೇವರ ವಿಗ್ರಹಗಳನ್ನ ತಂದು ಪೂಜೆ ಸಲ್ಲಿಸುವುದು ಇಲ್ಲಿನ ಸಂಪ್ರದಾಯ. ಯುಗಾದಿಯ ಈ ಸಂದರ್ಭದಲ್ಲಿ ಕಪ್ಪಡಿ ಜಾತ್ರೆ, ಬೋಪ್ಪೆಗೌಡನಪುರ ಮಠಕ್ಕೆ ಭೇಟಿ ನೀಡಿ, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಭಕ್ತರು ಮನೆಗೆ ತೆರಳುವುದು ಇಲ್ಲಿನ ವಾಡಿಕೆ.

ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಭಾಗದಿಂದ ಸಾವಿರಾರು ಮಂದಿ ಭಕ್ತರು ಆಗಮಿಸಿದ್ದು, ತಾಲೂಕು ಆಡಳಿತದ ವತಿಯಿಂದ ತಾತ್ಕಾಲಿಕ ಸ್ನಾನದ ಕೊಠಡಿ ಹಾಗೂ ಶೌಚಾಲಯ ನಿರ್ಮಾಣ ಮಾಡಲಾಗಿದೆ.‌ ಜತೆಗೆ ಮುಂಜಾಗೃತ ಕ್ರಮವಾಗಿ ಪೊಲೀಸ್​​ ‌ಭದ್ರತೆ ಒದಗಿಸಲಾಗಿದೆ.

ಇದನ್ನೂ ಓದಿ: ನಿವೃತ್ತರಾಗಿ ತವರಿಗೆ ಬಂದ ಯೋಧರಿಗೆ ಅದ್ಧೂರಿ ಸ್ವಾಗತ.. ದೇಶ ಸೇವೆಗೆ ಸಂದ ಗೌರವ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.